ಪ್ರೀತಿ ಗಲಾಟೆಗೆ 18ನೇ ವರ್ಷಕ್ಕೆ ಬಾಳು ಅಂತ್ಯ!

ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಪ್ರೀತಿಸಿದವನ ಜೊತೆಗೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆದಿದೆ.

ಶ್ವೇತಾ ಕೊಟೆನ್ನವರ ಆತ್ಮಹತ್ಯೆ ಮಾಡಿಕೊಂಡುರುವ ಯುವತಿಯಾಗಿದ್ದು, ಈಕೆಗೆ ಕೇವಲ 18 ವರ್ಷ ವಯಸ್ಸಾಗಿತ್ತು ಅಷ್ಟೇ. ಈಕೆ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ತಾನು ಆತನನ್ನೇ ಮದುವೆಯಾಗುತ್ತೇನೆ ಎಂದು ಪೋಷಕರನ್ನು ಕೇಳಿದಾಗ ಕುಟುಂಬಸ್ಥರು ಬೇಡ ಎಂದು ವಿರೋಧ ವ್ಯಕ್ತಪಡಿಸಿದ್ದಾರೆ.

ಇದರಿಂದ ಮನನೋದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಗಾಗಲೇ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಷ್ಟು ವರ್ಷದಿಂದ ಪ್ರೀತಿ ಮಾಡುತ್ತಿದ್ದರು, ಮದುವೆಗೆ ಹುಡುಗನ ಒಪ್ಪಿಗೆ ಎಂದೆಲ್ಲಾ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದಾರೆ.

 

About The Author