ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ನಡೆದಿದೆ.

ಸೃಜನ್ ಬ್ಯಾತನಾಳ (10) ಹಾಗೂ ಸಚಿನ್ ಬ್ಯಾತನಾಳ (12) ಮೃತಪಟ್ಟ ಸಹೋದರರು. ಇವರು ಬೇಸಿಗೆ ರಜೆಗೆ ಇನಾಂ ನೀರಲಗಿ ಗ್ರಾಮದಿಂದ ಕಂಚಿನೆಗಳೂರಿನ ಸಂಬಂಧಿಕರ ಮನೆಗೆ ಬಂದಿದ್ದರು. ಬೆಸಿಗೆಯ ಬಿಸಿಲಲ್ಲಿ ಧರ್ಮಾ ಕಾಲುವೆಯಲ್ಲಿ ಈಜಲು ತೆರಳಿದ ವೇಳೆ ಈಜು ಬಾರದೆ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಆಡೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಹಾನಗಲ್: ಕೆರೆಯಲ್ಲಿ ಈಜಲು ತೆರಳಿದ್ದ ಉತ್ತರ ಪ್ರದೇಶದ ಯುವಕ ನೀರುಪಾಲು

ಕೆರೆಯಲ್ಲಿ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಮಂತಗಿ ಗ್ರಾಮದಲ್ಲಿ ನಡೆದಿದೆ. ಪೈಜಾನ್ (21) ಮೃತ ಯುವಕನಾಗಿದ್ದು, ಉತ್ತರ ಪ್ರದೇಶ ಮೂಲದವನು ಎಂದು ತಿಳಿದುಬಂದಿದೆ. ಸಮ್ಮಸಗಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು, ಸಲೂನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಕೆರೆಯಲ್ಲಿ ಈಜಲು ತೆರಳಿದ ವೇಳೆ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಹಾನಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




