Hubli News: ನೀಟ್ ಹಗರಣ ಖಂಡಿಸಿ ಎನ್‌ಎಸ್‌ಯುಐ ಪ್ರತಿಭಟನೆ

Hubli News: ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್ ಹಗರಣ ಖಂಡಿಸಿ ಇಂದು ಬೆಳಿಗ್ಗೆ 11.30ಕ್ಕೆ ಹುಬ್ಬಳ್ಳಿಯ ಬಿವಿಬಿ ವಿಶ್ವವಿದ್ಯಾಲಯ ವೃತ್ತದಲ್ಲಿ ಎನ್‌ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗಿದ್ದು, ಈ ಪ್ರಕರಣದ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರ ಹಾಗೂ ಪರೀಕ್ಷಾ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ನೀಟ್ ಹಗರಣದ ವಿರುದ್ಧ ಎನ್‌ಎಸ್‌ಯುಐ ಹೋರಾಟ ಮುಂದುವರಿಯಲಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿಗಾಗಿ ನ್ಯಾಯ ಸಿಗುವವರೆಗೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

About The Author