Dharwad News: ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿ ಸಾವು

Dharwad News: ಧಾರವಾಡದಲ್ಲಿ ವಿದ್ಯುತ್ ತಂತಿ ತಗುಲಿ ಪೇಯಿಂಟಿಂಗ್ ಮೇಸ್ತ್ರಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಕೆಎಂಎಫ್ ಸಮೀಪ ಈ ಘಟನೆ ನಡೆದಿದ್ದು, ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧಾರವಾಡದ ಕೆಎಂಎಫ್ ಸಮೀಪ ಪೇಯಿಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕನೊಬ್ಬ ಮೃತಪಟ್ಟಿದ್ದಾನೆ. ಮಾಳಾಪುರ ನಿವಾಸಿ ನಬಿಸಾಬ್ ಚಂಕಣ್ಣವರ, 44 ವರ್ಷ, ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ನಬಿಸಾಬ್ ಅವರು ಪೇಯಿಂಟಿಂಗ್ ಅಂಗಡಿ ಮಾಲೀಕರ ಅಂಗಡಿಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶವಾಗಿದೆ ಎನ್ನಲಾಗಿದೆ. ವಿದ್ಯುತ್ ಪ್ರವಹಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ನಬಿಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಧಾರವಾಡದ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

About The Author