Political News: ಮಾಜಿ ಸಿಎಂ ದಿವಂಗತ ದೇವರಾಜು ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ(50) ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಎಐಸಿಸಿ ಕಾರ್ಯದರ್ಶಿಯಾಗಿದ್ದ ಸೂರಜ್ ನಿನ್ನೆ ರಾತ್ರಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಹೃದಯಾಘಾತವಾಗಿ, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸೂರಜ್ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಈ ಬಗ್ಗೆ ಸಂತಾಪಸೂಚಿಸಿರುವ ಸಿಎಂ, ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು. ಕಾರ್ಯಕರ್ತರೊಂದಿಗೆ ಸದಾ ಉತ್ತಮ ಬಾಂಧವ್ಯ ಹೊಂದಿದ್ದ ಒಬ್ಬ ಸಕ್ರಿಯ ನಾಯಕನನ್ನು ಇಂದು ನಾವು ಕಳೆದುಕೊಂಡಿದ್ದೇವೆ. ಈ ಕಷ್ಟದ ಸಮಯದಲ್ಲಿ ಭಗವಂತನು ಅವರ ಕುಟುಂಬದ ಸದಸ್ಯರಿಗೆ ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆಯ ವೇದನೆಯನ್ನು ಸಹಿಸುವ ಧೈರ್ಯವನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಸಂತಾಪ ಸೂಚಿಸಿದ್ದಾರೆ.
ಗೃಹಸಚಿವ ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್ ಸೇರಿ ಹಲವು ಕಾಂಗ್ರೆಸ್ ನಾಯಕರು ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ.
ಎಐಸಿಸಿ ಕಾರ್ಯದರ್ಶಿಗಳು, ಕೆಪಿಸಿಸಿ ಉಪಾಧ್ಯಕ್ಷರು ಹಾಗೂ ರಾಜ್ಯ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷರಾಗಿದ್ದ ನನ್ನ ಆತ್ಮೀಯ ಸಹೋದ್ಯೋಗಿ ಶ್ರೀ ಸೂರಜ್ ಹೆಗ್ಗಡೆ ಅವರ ಹಠಾತ್ ನಿಧನದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.
ಸಂಘಟನಾ ಚಾತುರ್ಯ ಹಾಗೂ ಜನಪರ ಕಾಳಜಿಯ ಮೂಲಕ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಅವರು ನೀಡಿದ ಕೊಡುಗೆ ಅನನ್ಯವಾದದ್ದು.… pic.twitter.com/ngvs4PZZJQ
— DK Shivakumar (@DKShivakumar) June 7, 2026




