Uttar Pradesh: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಕಾಣಿಕೆಗಳು ಕಾಣೆಯಾಗಿದೆ ಎಂಬ ವರಿಯಾದರೂ ಕೂಡ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರ್ಕಾರ ಮೌನವಾಗಿರುವುದು ಅನುಮಾನಾಸ್ಪದವಾಗಿದೆ ಎಂದು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿರುವ ಅವರು, ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ ಇದು ಅತ್ಯಂತ ಸೂಕ್ಷ್ಮವಾದ ಸುದ್ದಿಯಾಗಿದೆ: ‘ರಾಮ ಮಂದಿರ’ಕ್ಕೆ ಬಂದ ಕೋಟ್ಯಂತರ ರೂಪಾಯಿ ಕಾಣಿಕೆಗಳು ಕಾಣೆಯಾಗಿವೆ. ದೇವಾಲಯದ ಟ್ರಸ್ಟ್ಗೆ ಇದು ಅತ್ಯಂತ ನಾಚಿಕೆಗೇಡಿನ ಪರಿಸ್ಥಿತಿ. ಯಾರೂ ಯಾವುದೇ ವಿವರಣೆಯನ್ನು ನೀಡಲು ಮುಂದೆ ಬರುತ್ತಿಲ್ಲ.
ಜಾಗತಿಕ ಮಟ್ಟದಲ್ಲಿ ಇಡೀ ಸನಾತನ ಸಮಾಜವು ರಾಮನ ಮೇಲಿನ ಆಳವಾದ ನಂಬಿಕೆಗೆ ನೇರವಾಗಿ ಸಂಬಂಧಿಸಿರುವುದರಿಂದ, ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕೆಂಬ ಬೇಡಿಕೆ ಇದೆ. ಸರ್ಕಾರದ ಮೌನ ಅನುಮಾನಾಸ್ಪದವಾಗಿದೆ ಎಂದು ಆರೋಪಿಸಿದ್ದಾರೆ. ಅಲ್ಲದೇ ಕೋರ್ಟ್ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಖಿಲೇಶ್ ಯಾದವ್ ಆಗ್ರಹಿಸಿದ್ದಾರೆ.




