Political News: ಜನರ ಬಗ್ಗೆ ಕಳಕಳಿ ಇದ್ದರೆ ರಾಜ್ಯದ ಪಾಲಿನ ತೆರಿಗೆ ಕಡಿ‌ಮೆ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

Political News: ಇಂದು ಮಾಧ್ಯಮಗಳ ಜತೆ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಸ್ತಾಂತರ ಮೇಲ್ನೋಟಕ್ಕೆ ಬಹಳ ಸುಗಮವಾಗಿ ಆಯಿತು ಎನ್ನುವಂತೆ ಕಾಣಿಸುತ್ತಿದೆ. ಆದರೆ, ಒಳ ಬೇಗುದಿ ಇನ್ನೂ ಕೆಂಡದಂತೆ ಜೀವಂತ ಆಗಿದೆ. ಅದರ ಲಕ್ಷಣಗಳೇ ಖಾತೆಗೊಂದಲ ನಡೆಯುತ್ತಿದೆ. ಎರಡನೇಯದಾಗಿ ಸಿದ್ದರಾಮಯ್ಯ ನಾಯಕತ್ವ ಒಪ್ಪಿಕೊಂಡಂತೆ ಕಾಂಗ್ರೆಸ್ ನ ಶಾಸಕರು, ಮಂತ್ರಿಗಳು ಡಿ.ಕೆ. ಶಿವಕುಮಾರ್ ಅವರನ್ನು ಒಪ್ಪಿಕೊಂಡಿಲ್ಲ. ರಾಜಕೀಯವಾಗಿ ಸ್ಥಿರವಾಗಿದ್ದರೆ ಮಾತ್ರ ಒಳ್ಳೆಯ ಆಡಳಿತ ಕೊಡಲು ಸಾಧ್ಯ. ಕಾಂಗ್ರೆಸ್ ಪಕ್ಷದ ಸಂಘರ್ಷಾತ್ಮಕ ರಾಜಕಾರಣದಲ್ಲಿ ಸಾಮಾನ್ಯ ಜನರ ಬದುಕು ದುಸ್ತರವಾಗುವುದು ಸ್ಪಷ್ಟವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೂ ಎರಡು ವಾರದಲ್ಲಿ ಯುದ್ಧ ಮುಗಿಯಲಿದೆ ಎಲ್ಲವೂ ಸರಿಯಾಗಲಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ಬಿಕ್ಕಟ್ಟು ಉಂಟಾಗಿರುವುದರಿಂದ ಈ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಪೆಟ್ರೋಲ್ , ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಿ ದರ ಇಳಿಸಬೇಕು ನಾನು ಸಿಎಂ ಆಗಿದ್ದಾಗ 7 ರೂಪಾಯಿ‌ ಕಡಿತ ಮಾಡಿದ್ದೇ. ಅದೇ ರೀತಿ ರಾಜ್ಯ ಸರ್ಕಾರ ಕಡಿಮೆ‌ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ನೈಯಾಪೈಸೆ ಕಡಿಮೆ‌ ಮಾಡಿಲ್ಲ. ಅದರ ಬದಲು ತೆರಿಗೆ ಹೆಚ್ಚಳ ಮಾಡಿದ್ದಾರೆ. ಅವರು ಬೇರೆಯವರ ಮೇಲೆ ಬೊಟ್ಟು ಮಾಡಿ ತೋರಿಸುತ್ತಾರೆ. ದೇಶದಲ್ಲಿ ಪೆಟ್ರೋಲ್, ಡಿಸೇಲ್ ಮೇಲೆ ಅತೀ ಹೆಚ್ಚು ತೆರಿಗೆ ರಾಜ್ಯ ಸರ್ಕಾರ ಹಾಕುತ್ತಿದೆ. ಅದನ್ನು ಕಡಿಮೆ‌ ಮಾಡಿದರೆ ಜನರಿಗೆ ಅನಕೂಲ ಆಗುತ್ತದೆ. ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಇದೆ ಅದನ್ನು ಒಪ್ಪಿಕೊಳ್ಳುವುದಿಲ್ಲ. ಜನರ ಬಗ್ಗೆ ಕಳಕಳಿ ಇದ್ದರೆ ರಾಜ್ಯದ ಪಾಲಿನ ತೆರಿಗೆ ಕಡಿ‌ಮೆ ಮಾಡುತ್ತಾರೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

About The Author