ಕೊಪ್ಪಳ ದಲ್ಲಿ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆ

Koppala News: ಕೊಪ್ಪಳ:– ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ವಿರುದ್ಧ ಬೃಹತ್ ಪ್ರತಿಭಟನೆಯನ್ನು ಕೈಗೊಳ್ಳಲಾಯಿತು

ಕೇಂದ್ರ ಸರ್ಕಾರದ ಮಿತಿಮೀರಿದ ಬೆಲೆ ಏರಿಕೆ ವಿರುದ್ಧ ಕೊಪ್ಪಳ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಮುಖಂಡರು ಮತ್ತು ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಕೊಪ್ಪಳದ ಅಶೋಕ ವೃತ್ತ ಮತ್ತು ಬಸವೇಶ್ವರ ವೃತ್ತದ ಬಳಿ ಬೃಹತ್ ಪ್ರತಿಭಟನೆಯನ್ನು ಮಾಡಲಾಯಿತು

ಬಿಜೆಪಿ ಕೇಂದ್ರ ಸರ್ಕಾರ ಅಚ್ಚೇ ದಿನ್ ಹೆಸರಲ್ಲಿ ಸುಮಾರು 12 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ, ತಪ್ಪು ಆರ್ಥಿಕ ನೀತಿಗಳಿಂದ ಮಿತಿಮೀರಿದ ಬೆಲೆ ಏರಿಕೆ ಮಾಡಿ ಬಡವರ ಮತ್ತು ಮಧ್ಯಮ ವರ್ಗದವರನ್ನು ಬೀದಿಗೆ ತರುತ್ತಿದೆ ಎಂದು ಆರೋಪ

ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ತಪ್ಪು ಆರ್ಥಿಕ ನೀತಿಗಳಿಂದ ಮತ್ತು ಬೆಲೆ ಏರಿಕೆ ಕ್ರಮಗಳನ್ನು ವಿರೋಧಿಸಿ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಕೊಪ್ಪಳದ ಶಾಸಕ ರಾಘವೇಂದ್ರ ಇಟ್ನಾಳ್ ಮತ್ತು ಸಂಸದ ರಾಜಶೇಖರ್ ಹಿಟ್ನಾಳ ಸೇರಿದಂತೆ ಕೊಪ್ಪಳ ಕಾಂಗ್ರೆಸ್ ಮುಖಂಡರುಗಳಾದ ಅಮರೇಗೌಡ ಬಯ್ಯಾಪುರ ಕೊಪ್ಪಳದ ಕಾಂಗ್ರೆಸ್ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು

About The Author