Siddapura News: ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ತ್ಯಾಗಲಿ ಗ್ರಾಮ ಸರ್ವೆ ನಂಬರ್ 160 ರ ಮಾಲ್ಕಿ ಜಾಗೆಯಲ್ಲಿ 2 ವರ್ಷದ ಹೆಣ್ಣು ಕಡವೆಯೊಂದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಇಂದು ನಡೆದಿದೆ.
ಇಲಾಖೆಯ ಶ್ವಾನದಳ ಸ್ಥಳಕ್ಕೆ ಬಂದಿದ್ದು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿತ್ತು.ಶಿರಸಿ ವಲಯ ಅರಣ್ಯಾಧಿಕಾರಿ ಗಿರೀಶ ನಾಯ್ಕ್ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.




