Political News: ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ.: ಬಿ.ಕೆ.ಹರಿಪ್ರಸಾದ್

Political News: ಆರ್‌ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿದ್ದಕ್ಕೆ ಆರ್ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರು, ಹಿಂದೂ ಧರ್ಮ ನೋಂದಣಿಯಾಗಿಲ್ಲ ಎಂದು ಆರ್ಎಸ್‌ಎಸ್‌ನ್ನು ಹಿಂದೂ ಧರ್ಮಕ್ಕೆ ಹೋಲಿಸಿ ಮಾತನಾಡಿದ್ದರು.

ಈ ಬಗ್ಗೆ ಕೆಪಿಸಿಸಿ ಅಧ್ಕ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದು, ಆರ್ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಆರ್‌ಎಸ್‌ಎಸ್‌ ಅನ್ನು ಹಿಂದೂ ಧರ್ಮಕ್ಕೆ ಹೋಲಿಕೆ ಮಾಡಿರುವುದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ.

ಸಾವಿರಾರು ವರ್ಷಗಳ ಇತಿಹಾಸ, ಸಂಸ್ಕೃತಿ, ತತ್ವಶಾಸ್ತ್ರ ಮತ್ತು ವೈವಿಧ್ಯತೆಯನ್ನು ಹೊಂದಿರುವ ಹಿಂದೂ ಧರ್ಮವನ್ನು ಒಂದು ನಿರ್ದಿಷ್ಟ ಸಂಘಟನೆಯ ಮಟ್ಟಕ್ಕೆ ಇಳಿಸಿ ನೋಡುವುದು ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಅವಮಾನ. ಹಿಂದೂ ಧರ್ಮವು ಯಾವುದೇ ಒಂದು ಸಂಘಟನೆಯ ಸ್ವತ್ತಲ್ಲ.

ಅದು ಆರ್‌ಎಸ್‌ಎಸ್‌ಗಿಂತಲೂ ದೊಡ್ಡದು, ವಿಶಾಲವಾದುದು ಮತ್ತು ಎಲ್ಲರನ್ನು ಒಳಗೊಳ್ಳುವ ನಾಗರಿಕತಾ ಪರಂಪರೆ. ವಿವಾದಾತ್ಮಕ ಹಿನ್ನೆಲೆ ಹೊಂದಿರುವ ಒಂದು ಸಂಘಟನೆಯನ್ನು ಸಂಪೂರ್ಣ ಹಿಂದೂ ಸಮಾಜದ ಪ್ರತಿನಿಧಿಯಂತೆ ಬಿಂಬಿಸುವುದು ಸರಿಯೇ? ಎಂದು ಬಿ.ಕೆ.ಹರಿಪ್ರಸಾದ್ ಪ್ರಶ್ನಿಸಿದ್ದಾರೆ.

ಹಿಂದೂತ್ವದ ಬಗ್ಗೆ ದಿನವೂ ದೊಡ್ಡ ದೊಡ್ಡ ಭಾಷಣ ಮಾಡುವ ಬಿಜೆಪಿಯ ನಾಯಕರು ಮತ್ತು ಸ್ವಯಂ ಘೋಷಿತ ‘ಹಿಂದೂ ರಕ್ಷಕರು’ ಈಗ ಏನು ಹೇಳುತ್ತಾರೆ? ಹಿಂದೂ ಧರ್ಮ ಮತ್ತು ಆರ್‌ಎಸ್‌ಎಸ್‌ ಒಂದೇ ಎಂದು ಹೇಳುವುದನ್ನು ಅವರು ಒಪ್ಪುತ್ತಾರೆಯೇ? ಎಂದು ಬಿ.ಕೆ.ಹರಿಪ್ರಸಾದ್ ಬಿಜೆಪಿಗರಿಗೆ ತಿರುಗೇಟು ನೀಡಿದ್ದಾರೆ.

 

About The Author