Hubli News: ಶಾಸಕ ಪ್ರಸಾದ ಅಬ್ಬಯ್ಯಗೆ ಸಚಿವ ಸ್ಥಾನಕ್ಕೆ ನೀಡಬೇಕೆಂದು ಒತ್ತಾಯ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿ ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದರು.

ಹುಬ್ಬಳ್ಳಿ ತಾಲೂಕ ರೈತ ಸಂಘದ ವತಿಯಿಂದ ನಗರದ ಬಂಕಾಪೂರ ಚೌಕದಲ್ಲಿ ವಿನೂತನ ಪ್ರತಿಭಟನೆ ನಡೆಸಿ, ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಲಾಯಿತು.

ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ರೈತ ಮುಖಂಡರು, ಜನಪರ ಅಭಿವೃದ್ಧಿ, ಸಾಮಾಜಿಕ ಕಾಳಜಿ ಹಾಗೂ ರೈತರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿರುವ ನಾಯಕನಾಗಿ ಪ್ರಸಾದ ಅಬ್ಬಯ್ಯ ಗುರುತಿಸಿಕೊಂಡಿದ್ದಾರೆ ಎಂದು ಹೇಳಿದರು.

ರೈತರು, ಕಾರ್ಮಿಕರು, ಬಡವರು ಸೇರಿದಂತೆ ಎಲ್ಲ ಸಮುದಾಯಗಳ ಸಮಸ್ಯೆಗಳಿಗೆ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಅಬ್ಬಯ್ಯ ಅವರು ಸತತ ಮೂರು ಬಾರಿ ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದಿಂದ ಗೆಲುವು ಸಾಧಿಸಿದ್ದು, ಜನರ ಅಪಾರ ವಿಶ್ವಾಸ ಗಳಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ನೀಡಿರುವ ಕೊಡುಗೆ ಹಾಗೂ ಜನಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಸಚಿವ ಸ್ಥಾನ ದೊರೆತಲ್ಲಿ ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗಲಿದ್ದು, ಜನರ ನಿರೀಕ್ಷೆಗಳಿಗೆ ನ್ಯಾಯ ದೊರೆಯಲಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

About The Author