Hubli :ಮೊದಲು ಗೃಹಲಕ್ಷ್ಮೀ ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ಮಾಡಿ: ಮಹೇಶ್ ಟೆಂಗಿನಕಾಯಿ

Hubli Political News: ಗೃಹಲಕ್ಷ್ಮಿ ಯೋಜನೆಯ ಹಣದ ಅವ್ಯವಹಾರ ಮುಚ್ಚಿಹಾಕಲು ಫಲಾನುಭವಿಗಳ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ, ಮೊದಲು ಬಾಕಿ ಹಣ ಬಿಡುಗಡೆ ಮಾಡಿ ನಂತರ ಪರಿಷ್ಕರಣೆ ನಡೆಸಲಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಗೃಹಲಕ್ಷ್ಮಿ ಯೋಜನೆಯಡಿ 2025ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಸುಮಾರು ಐದು ಸಾವಿರ ಕೋಟಿ ರೂಪಾಯಿ ಹಣ ಇನ್ನೂ ಫಲಾನುಭವಿಗಳಿಗೆ ತಲುಪಿಲ್ಲ ಎಂದು ಆರೋಪಿಸಿದರು. ಈ ಬಗ್ಗೆ ವಿಧಾನಸಭೆಯಲ್ಲಿಯೂ ಪ್ರಶ್ನೆ ಮಾಡಿದ್ದರೂ ಸರ್ಕಾರ ಸ್ಪಷ್ಟ ಉತ್ತರ ನೀಡಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳಲ್ಲಿ ಆಗಿರುವ ಲೋಪಗಳನ್ನು ಮರೆಮಾಚಲು ಫಲಾನುಭವಿಗಳ ಪರಿಷ್ಕರಣೆ ಎಂಬ ಹೆಸರಿನಲ್ಲಿ ಸರ್ಕಾರ ಮುಂದಾಗಿದೆ ಎಂದು ಕಿಡಿಕಾರಿದ ಅವರು, ಸಿಎಜಿ ವರದಿಯಲ್ಲೂ ಅವ್ಯವಹಾರದ ಉಲ್ಲೇಖವಿದ್ದು, ಅದಕ್ಕೆ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಸ್ವಾಗತಿಸಿದ ಮಹೇಶ್ ಟೆಂಗಿನಕಾಯಿ, ಮತದಾರರ ಪಟ್ಟಿಯಲ್ಲಿ ಅನಧಿಕೃತ ಹೆಸರುಗಳು ಇರಬಾರದು. ಅರ್ಹ ಮತದಾರರೆಲ್ಲರೂ ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸಹಕರಿಸಬೇಕು ಎಂದು ಕರೆ ನೀಡಿದರು.

About The Author