ಚಪ್ಪಲಿ ಎಸೆತ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಪ್ರದೀಪ್ ಈಶ್ವರ್

Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್‌ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಪ್ರದೀಪ್ ಈಶ್ವರ್ ಮಾಜಿ ಸಿಎಂ ಸಿದ್ದರಾಮಯ್ಯನ್ನು ಭೇಟಿ ಮಾಡಿದ್ದು, ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ, ಕೆಂಪೇಗೌಡ ಜಯಂತಿ ಆಚರಣೆಯ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ತಮ್ಮ ಮೇಲೆ ಚಪ್ಪಲಿ ಎಸೆದು, ತಮ್ಮ ಕುಟುಂಬದವರನ್ನು ನಿಂದಿಸಿದ್ದು ಸೇರಿದಂತೆ ಅಂದು ನಡೆದ ಎಲ್ಲಾ ಘಟನೆಯನ್ನು ವಿವರಿಸಿ, ತಮ್ಮ ನೋವನ್ನು ಹಂಚಿಕೊಂಡರು.

ಈ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿದ್ದರಾಮಯ್ಯ, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯವಾಗಿದ್ದು, ಇಲ್ಲೇ ಇದ್ದು ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ, ನಿಮ್ಮೊಂದಿಗೆ ನಾವಿದ್ದೇವೆ ಎಂದು ಪ್ರದೀಪ್ ಈಶ್ವರ್‌ಗೆ ಧೈರ್ಯ ತುಂಬಿದ್ದಾರೆ

ಅಲ್ಲದೇ ಸಿದ್ದರಾಮಯ್ಯನವರು ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ ಅವರಿಗೂ ದೂರವಾಣಿ ಕರೆಮಾಡಿ, ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಹೇಳಿ, ಪೋಲೀಸರ ಸಮ್ಮುಖದಲ್ಲೇ ಆಡಳಿತ ಪಕ್ಷದ ಶಾಸಕನಿಗೆ ಈ ರೀತಿ ಆಗಿರುವುದು ಅಕ್ಷಮ್ಯ. ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಅಗತ್ಯ ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ.

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವರಾದ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

About The Author