Gold Rate: ಭಾರಿ ಕುಸಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳಲ್ಲಿ ಇಂದು ದಿಢೀರ್ ಜಂಪ್ ಕಂಡುಬಂದಿದೆ. ಒಂದೇ ದಿನದಲ್ಲಿ ಚಿನ್ನದ ಬೆಲೆ ಸಾವಿರಾರು ರೂಪಾಯಿ ಏರಿಕೆಯಾಗಿದ್ದು, ಹೂಡಿಕೆದಾರರು ಮತ್ತೆ ಲೋಹಗಳತ್ತ ಆಕರ್ಷಿತರಾಗಿದ್ದಾರೆ.
ಜೂನ್ ತಿಂಗಳಲ್ಲಿ ಭಾರಿ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆ ಕಂಡಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಒಂದೇ ದಿನದಲ್ಲಿ 3,770 ರೂಪಾಯಿ ಹೆಚ್ಚಳವಾಗಿದ್ದು, ಈಗ 10 ಗ್ರಾಂ ಚಿನ್ನದ ಬೆಲೆ 1,44,550 ರೂಪಾಯಿಗೆ ತಲುಪಿದೆ. ಪ್ರತಿ ಗ್ರಾಂಗೆ 377 ರೂಪಾಯಿ ಏರಿಕೆಯಾಗಿದ್ದು, 24 ಕ್ಯಾರೆಟ್ ಚಿನ್ನದ ದರ 14,455 ರೂಪಾಯಿಗೆ ಏರಿಕೆಯಾಗಿದೆ.
ಇದೇ ರೀತಿ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಏರಿಕೆ ಕಂಡುಬಂದಿದೆ. ಪ್ರತಿ ಗ್ರಾಂಗೆ 345 ರೂಪಾಯಿ ಹೆಚ್ಚಳವಾಗಿದ್ದು, 10 ಗ್ರಾಂ ಬೆಲೆ 1,32,500 ರೂಪಾಯಿಗೆ ತಲುಪಿದೆ. ಬೆಳ್ಳಿ ಬೆಲೆಯಲ್ಲೂ ಭಾರಿ ಜಂಪ್ ಕಂಡುಬಂದಿದೆ. ಪ್ರತಿ ಗ್ರಾಂಗೆ 5 ಸಾವಿರ ರೂಪಾಯಿ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಈಗ 245 ರೂಪಾಯಿಗೆ ತಲುಪಿದೆ. ಒಂದು ಕೆಜಿಗೆ ಬೆಲೆ ಸುಮಾರು 2,45,000 ರೂಪಾಯಿವರೆಗೆ ದಾಖಲಾಗಿದೆ.
ಮಾರುಕಟ್ಟೆ ತಜ್ಞರ ಪ್ರಕಾರ, ಹಬ್ಬದ ಸೀಸನ್ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಬೇಡಿಕೆ ಹೆಚ್ಚಳವಾಗುವ ನಿರೀಕ್ಷೆಯಿದೆ. ಆಗಸ್ಟ್ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇನ್ನಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇತ್ತೀಚಿನ ಕುಸಿತದ ನಂತರ ಚಿನ್ನ ಮತ್ತು ಬೆಳ್ಳಿ ಮಾರುಕಟ್ಟೆ ಮತ್ತೆ ಚೇತರಿಕೆ ಕಂಡಿದ್ದು, ಹೂಡಿಕೆದಾರರು ಹಾಗೂ ಗ್ರಾಹಕರಿಗೆ ಮುಂದಿನ ದಿನಗಳಲ್ಲಿ ಬೆಲೆ ಏರಿಳಿತದ ಮೇಲೆ ಕಣ್ಣಿಟ್ಟಿರುವ ಅಗತ್ಯವಿದೆ.




