Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್ ಯಾವುದೇ ಕಾರಣಕ್ಕೂ ಖಾಸಗಿಕರಣ ಆಗುವುದಿಲ್ಲ ಎಂದು ಹೇಳಿದರು.
ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ವಿದ್ಯುತ್ ಇಲಾಖೆಯ ಕಾರ್ಯಕ್ರಮ ಒಂದರಲ್ಲಿ ವಿದ್ಯುತ್ತನ್ನು ಯಾವುದೇ ಕಾರಣಕ್ಕೂ ಖಾಸಗಿ ಕರಣ ಮಾಡೋದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೋ ಗಾಳಿ ಸುದ್ದಿಗೆ ಕಿವಿ ಕೊಡಬೇಡಿ ಎಂದು ಅಜ್ಜಂಪೀರ್ ಖಾದ್ರಿ ಹೇಳಿದ್ದಾರೆ.
ಗ್ರಹ ಜ್ಯೋತಿ ರಾಜ್ಯದಲ್ಲಿ ಮರು ಪರಿಶೀಲನೆ ಮಾಡುತ್ತಿರುವುದು ಹೊರರಾಜ್ಯದವರು ಇದರ ಸದಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾತು ಕೇಳಿ ಬರ್ತಾ ಇತ್ತು. ಇದರಿಂದ ನಮ್ಮ ರಾಜ್ಯದವರು ನಮ್ಮ ಕನ್ನಡಿಗರು ಮಾತ್ರ ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಮರುಪರಿಶೀಲನೆ ಮಾಡಲಾಗುತ್ತಿದೆ.
ಜನರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಹೆಸ್ಕಾಂ ಇಲಾಖೆ ಅಧಿಕಾರಿಗಳು ಮನೆ ಬಾಗಿಲಿಗೆ ಬಂದಾಗ ಕೇಳುವ ದಾಖಲಾತಿ ನೀಡಿ ಅವರಿಗೆ ಸಹಕಾರ ನೀಡಬೇಕು ಎಂದು ಅಜ್ಜಂಪೀರ್ ಖಾದ್ರಿ ಹೇಳಿದರು.




