Hubli News: ಹುಬ್ಬಳ್ಳಿ ಪೂರ್ವ ಕ್ಷೇತ್ರದಲ್ಲೂ ಎಸ್‌ಐಆರ್ ಅಕ್ರಮ ಆರೋಪ

Hubli News: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದಲ್ಲೂ ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬೇಕಿದ್ದ ಬಿಎಲ್‌ಒ, ಒಂದೇ ಸ್ಥಳದಲ್ಲಿ ಕುಳಿತು ಮತದಾರರಿಂದ ಫಾರ್ಮ್ ಭರ್ತಿ ಮಾಡಿಸಿಕೊಳ್ಳುತ್ತಿರುವ ದೃಶ್ಯಗಳು ಬೆಳಕಿಗೆ ಬಂದಿವೆ.

ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ವಾರ್ಡ್-63, ಬೂತ್-16 ವ್ಯಾಪ್ತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂಬ ಆರೋಪ ವ್ಯಕ್ತವಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಮನೆ-ಮನೆಗೆ ತೆರಳಿ ಮತದಾರರ ವಿವರ ಸಂಗ್ರಹಿಸಬೇಕಿದ್ದರೂ, ಅದರ ಬದಲು ಒಂದೇ ಸ್ಥಳದಲ್ಲಿ ಫಾರ್ಮ್ ಭರ್ತಿ ಮಾಡಿಸಿಕೊಳ್ಳಲಾಗುತ್ತಿದೆ ಎನ್ನಲಾಗಿದೆ.

ಬಿಎಲ್‌ಒ ಮೇರಿ ರಾಮಚಂದ್ರ ಹರಪನಾಳ ಅವರು ಮನೆಗಳಿಗೆ ತೆರಳದೆ, ಒಂದೇ ಸ್ಥಳದಲ್ಲಿ ಕುಳಿತು ಮತದಾರರಿಂದ ಎನ್ಯೂಮರೇಷನ್ ಫಾರ್ಮ್‌ಗಳನ್ನು ಭರ್ತಿ ಮಾಡಿಸುತ್ತಿರುವುದು ಕಂಡುಬಂದಿದೆ. ಇದರಿಂದ ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದೆಯೇ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ್ದಾಗಿದ್ದು, ಚುನಾವಣಾ ಆಯೋಗದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದರೆ ನೆಲಮಟ್ಟದಲ್ಲಿ ನಡೆಯುತ್ತಿರುವ ಈ ರೀತಿಯ ಕಾರ್ಯವೈಖರಿ ಕುರಿತು ಸೂಕ್ತ ತನಿಖೆ ನಡೆಸಿ, ತಪ್ಪಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

About The Author