Hubli News: ವಿಶೇಷ ಮತದಾರರ ಪರಿಷ್ಕರಣೆ (SIR) ಪ್ರಕ್ರಿಯೆ ನೆಪದಲ್ಲಿ ಕಾಂಗ್ರೆಸ್ ಬೆಂಬಲಿಗರ ಮತಗಳನ್ನು ವ್ಯವಸ್ಥಿತವಾಗಿ ಅಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪ್ರಸಾದ್ ಅಬ್ಬಯ್ಯ, ಎಸ್ಐಆರ್ ಪ್ರಕ್ರಿಯೆ ಕುರಿತು ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು. ದಾಖಲೆ ಸಲ್ಲಿಸಲು ಅತ್ಯಂತ ಕಡಿಮೆ ಅವಧಿ ನೀಡಿರುವುದರಿಂದ ಅನೇಕ ಮತದಾರರು ಗೊಂದಲಕ್ಕೀಡಾಗಿದ್ದು, ತಮ್ಮ ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ ಎಂದು ಹೇಳಿದರು.
ಲಕ್ಷಾಂತರ ಮತಗಳನ್ನು ಮತದಾರರ ಪಟ್ಟಿಯಿಂದ ಡಿಲೀಟ್ ಮಾಡುವ ಸಂಚು ನಡೆಯುತ್ತಿದ್ದು, ಪವಿತ್ರವಾದ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಚುನಾವಣಾ ಆಯೋಗ ಈ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು ಎಂದು ಒತ್ತಾಯಿಸಿದರು.




