Gold Rate: ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್: ಸ್ವರ್ಣ ಬೆಲೆಯಲ್ಲಿ ಇಳಿಕೆ..

Gold Rate: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ವಾರದ ಮೊದಲ ದಿನವೇ ಸಿಹಿ ಸುದ್ದಿ ಸಿಕ್ಕಿದೆ. ಸೋಮವಾರ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆ ದಾಖಲಾಗಿದ್ದು, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ.

ಇಂದು 22 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹10 ಇಳಿಕೆಯಾಗಿ ₹13,440ಕ್ಕೆ ತಲುಪಿದೆ. 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹14,662 ಇದ್ದರೆ, 18 ಕ್ಯಾರಟ್ ಚಿನ್ನದ ಬೆಲೆ ₹10,997 ಆಗಿದೆ. 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ ₹1,34,400 ಹಾಗೂ 24 ಕ್ಯಾರಟ್ ಚಿನ್ನದ ಬೆಲೆ ₹1,46,620 ಇದೆ.

ಬೆಳ್ಳಿ ದರದಲ್ಲೂ ಇಳಿಕೆಯಾಗಿದ್ದು, ಪ್ರತಿ ಗ್ರಾಂಗೆ ₹5 ಕಡಿಮೆಯಾಗಿ ಬೆಂಗಳೂರು, ಮುಂಬೈ ಸೇರಿದಂತೆ ಪ್ರಮುಖ ನಗರಗಳಲ್ಲಿ ₹245ಕ್ಕೆ ಮಾರಾಟವಾಗುತ್ತಿದೆ. 100 ಗ್ರಾಂ ಬೆಳ್ಳಿ ಬೆಲೆ ₹24,500 ಇದೆ. ಆದರೆ ಚೆನ್ನೈ, ಕೇರಳ ಸೇರಿದಂತೆ ಕೆಲ ನಗರಗಳಲ್ಲಿ ಪ್ರತಿ ಗ್ರಾಂ ಬೆಳ್ಳಿ ₹250 ದರದಲ್ಲಿದೆ. ಬೆಂಗಳೂರಿನಲ್ಲೂ ದೇಶದ ಇತರ ಪ್ರಮುಖ ನಗರಗಳಂತೆಯೇ 24 ಕ್ಯಾರಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹14,662 ಹಾಗೂ 22 ಕ್ಯಾರಟ್ ಚಿನ್ನದ ಬೆಲೆ ₹13,440 ಇದೆ. ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ ₹245 ಆಗಿದೆ.

ತಜ್ಞರ ಪ್ರಕಾರ, ಜಾಗತಿಕ ಮಾರುಕಟ್ಟೆಯಲ್ಲಿನ ಚಿನ್ನದ ದರ, ಡಾಲರ್ ಮೌಲ್ಯ, ಕೇಂದ್ರ ಬ್ಯಾಂಕ್‌ಗಳ ಬಡ್ಡಿದರ ನೀತಿ ಹಾಗೂ ಭೌಗೋಳಿಕ ರಾಜಕೀಯ ಬೆಳವಣಿಗೆಗಳು ದೇಶೀಯ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮೇಲೆ ಪರಿಣಾಮ ಬೀರುತ್ತಿವೆ. ವಾರದ ಮೊದಲ ದಿನವೇ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಅಲ್ಪ ಇಳಿಕೆ ದಾಖಲಾಗಿದ್ದು, ಆಭರಣ ಖರೀದಿಸಲು ಮುಂದಾಗಿರುವ ಗ್ರಾಹಕರಿಗೆ ಇದು ಕೊಂಚ ನಿರಾಳತೆ ತಂದಿದೆ.

About The Author