ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬ ಆರೋಪ: 1 ವರ್ಷದ ಕಂದಮ ಸಾ*ವು

Haveri News: ವೈದ್ಯರಿಲ್ಲದೇ ಚಿಕಿತ್ಸೆ ವಿಳಂಬವಾದ ಕಾರಣ 1 ವರ್ಷದ ಕಂದಮ್ಮ ಬಲಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿಯ ಗುತ್ತಲ ಸರ್ಕಾರಿ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದ್ದು, ಭವಾನಿ ಮಹೇಶ್ ಕಿಳ್ಳಿಕ್ಯಾತರ್ ದಂಪತಿಯ ಹೆಣ್ಣು ಮಗು ಅನಾರೋಗ್ಯಕ್ಕೀಡಾಗಿದ್ದು, ಮನೆಯಲ್ಲಿ ಮೂರ್ಛೆ ತಪ್ಪಿ ಬಿದ್ದಿದೆ. ಪೋಷಕರು ಆಕೆಯನ್ನು ಹಾವನೂರು ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ವೈದ್ಯರಿಲ್ಲದ ಕಾರಣ, ಗುತ್ತಲ ಆಸ್ಪತ್ರೆಗೆ ರವಾನಿಸಲಾಗಿದೆ.

ಆದರೆ ಮಾರ್ಗ ಮಧ್ಯೆಯೇ ಮಗು ಸಾವನ್ನಪ್ಪಿದೆ. ಗುತ್ತಲ ಆಸ್ಪತ್ರೆಗೆ ತಂದಾಗ, ಮಗು ಆದಾಗಲೇ ಸಾವನ್ನಪ್ಪಿದೆ ಎಂದು ವೈದ್ಯರು ಹೇಳಿದ್ದಾರೆ. ಆಸ್ಪತ್ರೆ ನಿರ್ಲಕ್ಷ್ಯ ಮಾಡಿದ್ದಕ್ಕಾಗಿ ತಮ್ಮ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿರುವ ಮಗುವಿನ ಮನೆಯವರು ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ಸೂಕ್ತ ಚಿಕಿತ್ಸೆ ಸಿಕ್ಕಿದರೂ ನಮ್ಮ ಮಗು ಬುದುಕುತ್ತಿತ್ತು ಎಂದು ಪೋಷಕರು ಆರೋಪಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ. ಇನ್ನು

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ತಾಲ್ಲೂಕು ವೈದ್ಯಾಧಿಕಾರಿಗಳು, ಪರಿಸ್ಥಿತಿ ತಿಳಿಗ“ಳಿಸಲು ಯತ್ನಿಸಿದ್ದಾರೆ. ಆದರೆ ತಮ್ಮ ಮಗು ಇನ್ನು ವಾಪಸ್ ಬರಲು ಸಾಧ್ಯವಿಲ್ಲ. ಮತ್ತೆ ಯಾವ ಮಗುವಿಗೂ ಈ ರೀತಿಯಾಗಬಾರದು ಎಂದು ಆಸ್ಪತ್ರೆ ಆಡಳಿತದ ವಿರುದ್ಧ ಕ್ರಮ ಕೈಗ`ಳ್ಳಲೇಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ..

About The Author