Sandalwood: ಎಸ್.ಜಾನಕಿ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವಯೋಸಹಜದ ಖಾಯಿಲೆಯಿಂದ ಬಳಲುತ್ತಿದ್ದ ಜಾನಕಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಂಜೆ 7.30ರ ಸುಮಾರಿಗೆ ದೈವಾಧೀನರಾಗಿದ್ದಾರೆ.
ಜಾನಕಮ್ಮನವರ ಸಾವಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಪ್ರಖ್ಯಾತ ಗಾಯಕಿ, ‘ಗಾನ ಕೋಗಿಲೆ’ ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆ ತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ ಸಂಗೀತಪ್ರಿಯರ ಮನಸ್ಸಿನಲ್ಲಿ ಹಸಿರಾಗಿರುತ್ತಾರೆ. ಅವರ ಅಸಂಖ್ಯಾತ ಅಭಿಮಾನಿಗಳು, ಆಪ್ತರು, ಕುಟುಂಬ ವರ್ಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ ಎಂದು ಸಿಎಂ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಗಾನಕೋಗಿಲೆ, ಬಹುಭಾಷಾ ಗಾಯಕಿಯಾಗಿದ್ದ ಎಸ್. ಜಾನಕಿ ಅವರು ನಿಧನರಾದರು ಎಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ತಮ್ಮ ಮಧುರ ಕಂಠದಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಮಹಾನ್ ಗಾಯಕಿ ಎಸ್.ಜಾನಕಿ ಅವರು. ಮೈಸೂರಿನಲ್ಲಿ ನೆಲೆಸಿದ್ದ ಅವರು ಕನ್ನಡಿಗರಿಗೆ ಬಹು ಅಚ್ಚುಮೆಚ್ಚಿನ ಗಾಯಕರಾಗಿದ್ದರು. ಅವರ ನಿಧನ ಗಾನಲೋಕದಲ್ಲಿ ಬಹುದೊಡ್ಡ ಶೂನ್ಯವನ್ನು ಸೃಷ್ಟಿಸಿದೆ. ಆದರೂ ಅವರು ಬಿಟ್ಟು ಹೋಗಿರುವ ಸಂಗೀತ ಸಂಪತ್ತು ಅಮರ, ಅಜರಾಮರ. ಆ ಗಾನ ಸರಸ್ವತಿಯ ಆತ್ಮಕ್ಕೆ ಚಿರಶಾಂತಿ ಕೋರುತ್ತಾ ಅವರ ಬಂಧುಗಳು ಮತ್ತು ಅಭಿಮಾನಿ ಹಿತೈಷಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಹೃದಯಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಕೂಡ ಸಂತಾಪ ಸೂಚಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಎಸ್.ಜಾನಕಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ, 6 ದಶಕಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ. ಜಾನಕಿಯಮ್ಮನವರ ಧ್ವನಿಯಿಲ್ಲದ ಚಿತ್ರಗಳೇ ಅಪರೂಪ ಎನ್ನುವ ಕಾಲವೊಂದಿತ್ತು, ಆ ಮಟ್ಟಿನ ಬೇಡಿಕೆಯನ್ನು ತಮ್ಮ ಅನನ್ಯ ಕಂಠದ ಮೂಲಕ ಸೃಷ್ಟಿಸಿದ್ದ ಸಂಗೀತಶಾರದೆಯ ವರಪುತ್ರಿ ಅವರು. ಮೃತರ ಆತ್ಮಕ್ಕೆ ಚಿರಶಾಂತಿ ಲಭಿಸಲಿ, ಅವರ ಕುಟುಂಬವರ್ಗ ಮತ್ತು ಕೋಟ್ಯಂತರ ಸಂಗೀತ ಪ್ರಿಯರಿಗೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ನಿಧನದ ಸುದ್ದಿ ನೋವುಂಟು ಮಾಡಿದೆ. ಕನ್ನಡ ಭಾಷೆಯೂ ಸೇರಿದಂತೆ 20 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ, 6 ದಶಕಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಸಂಗೀತ ಸೇವೆಗೈದ ಮೇರು ಪ್ರತಿಭೆಯೊಂದು ನಮ್ಮನ್ನಗಲಿರುವುದು ಕಲಾ ಜಗತ್ತಿಗಾಗಿರುವ ತುಂಬಲಾರದ ನಷ್ಟ.
ಜಾನಕಿಯಮ್ಮನವರ ಧ್ವನಿಯಿಲ್ಲದ… pic.twitter.com/9U9idGWanf
— Siddaramaiah (@siddaramaiah) July 11, 2026
ಗಾನಕೋಗಿಲೆ, ಬಹುಭಾಷಾ ಗಾಯಕಿಯಾಗಿದ್ದ ಎಸ್. ಜಾನಕಿ ಅವರು ನಿಧನರಾದರು ಎಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು.
ತಮ್ಮ ಮಧುರ ಕಂಠದಿಂದ ಕೋಟ್ಯಂತರ ಸಂಗೀತ ಪ್ರೇಮಿಗಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿರುವ ಮಹಾನ್ ಗಾಯಕಿ ಎಸ್.ಜಾನಕಿ ಅವರು. ಮೈಸೂರಿನಲ್ಲಿ ನೆಲೆಸಿದ್ದ ಅವರು ಕನ್ನಡಿಗರಿಗೆ ಬಹು ಅಚ್ಚುಮೆಚ್ಚಿನ ಗಾಯಕರಾಗಿದ್ದರು.
ಅವರ ನಿಧನ… pic.twitter.com/BdaPgLvqan
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 11, 2026
ಹಾಡು ನಿಲ್ಲಿಸಿದ ʻಕೋಗಿಲೆʼ
ಪ್ರಖ್ಯಾತ ಗಾಯಕಿ, 'ಗಾನ ಕೋಗಿಲೆ' ಎಸ್. ಜಾನಕಿ ಅಮ್ಮ ಅವರ ನಿಧನವಾರ್ತೆ ತಿಳಿದು, ದುಃಖಿತನಾಗಿದ್ದೇನೆ. 17 ಭಾಷೆಗಳಲ್ಲಿ ತಮ್ಮ ಇಂಪಾದ ಕಂಠದ ಮೂಲಕ ಸಾವಿರಾರು ಹಾಡುಗಳನ್ನು ಹಾಡಿದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಗಾಯನವನ್ನೇ ಉಸಿರಾಗಿಸಿಕೊಂಡಿದ್ದ ಜಾನಕಮ್ಮನವರು, ಅವರ ಹಾಡುಗಳ ಮೂಲಕ ಸದಾ… pic.twitter.com/xPd9CRHRjK
— DK Shivakumar (@DKShivakumar) July 11, 2026
ಭಾರತೀಯ ಸಂಗೀತ ಲೋಕದ ಅಮರ ಗಾನಕೋಗಿಲೆ ಡಾ. ಎಸ್. ಜಾನಕಿ ಅವರ ನಿಧನದ ಸುದ್ದಿ ಅತ್ಯಂತ ದುಃಖಕರ.
ಐದು ದಶಕಗಳಿಗೂ ಹೆಚ್ಚು ಕಾಲ ತಮ್ಮ ಅಪೂರ್ವ ಕಂಠಸಿರಿಯ ಮೂಲಕ ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ ಸಾವಿರಾರು ಅಮರ ಗೀತೆಗಳನ್ನು ಹಾಡಿ, ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯದಲ್ಲಿ ಅಳಿಯದ ಸ್ಥಾನವನ್ನು ಗಳಿಸಿದ ಮಹಾನ್ ಗಾಯಕಿ ಅವರು.
ಅವರ… pic.twitter.com/kJypnkUshk
— Preetham J Gowda (@preethamgowda_j) July 11, 2026
ಗಾನಕೋಗಿಲೆ, ಭಾರತೀಯ ಚಿತ್ರರಂಗದ ದಂತಕಥೆ, ನಮ್ಮ ಹೆಮ್ಮೆಯ ಎಸ್. ಜಾನಕಿ ಅವರು ದೈವಾಧೀನರಾದ ಸುದ್ದಿ ತಿಳಿದು ಮನಸ್ಸಿಗೆ ಅತ್ಯಂತ ದುಃಖವಾಯಿತು.
ತಮ್ಮ ಆರು ದಶಕಗಳ ಸುದೀರ್ಘ ಸಂಗೀತ ಯಾನದಲ್ಲಿ ಸಾವಿರಾರು ಮಧುರ ಗೀತೆಗಳ ಮೂಲಕ ಕೋಟ್ಯಂತರ ಭಾರತೀಯರ ಮನಸ್ಸು ಗೆದ್ದ ಸುಸ್ವರದ ಸರಸ್ವತಿ ಅವರು. ಭಾಷೆಯ ಗಡಿ ಮೀರಿ ತಮ್ಮ ದಿವ್ಯ ಕಂಠದಿಂದ ಸಂಗೀತ… pic.twitter.com/REI8tzyi2s
— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) July 11, 2026
ಭಾರತೀಯ ಸಂಗೀತ ಲೋಕದ ಅಮೂಲ್ಯ ಧ್ವನಿಯಾಗಿದ್ದ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ತಮ್ಮ ಅಪೂರ್ವ ಗಾಯನದ ಮೂಲಕ ಕೋಟ್ಯಂತರ ಜನರ ಮನಸ್ಸನ್ನು ಸ್ಪರ್ಶಿಸಿದ ದಿಗ್ಗಜ ಹಿನ್ನಲೆ ಗಾಯಕಿ ಶ್ರೀಮತಿ ಎಸ್. ಜಾನಕಿ ಅಮ್ಮನವರು ಇಹಲೋಕ ತ್ಯಜಿಸಿದ ಸುದ್ದಿ ಅತ್ಯಂತ ದುಃಖ ತಂದಿದೆ.
ಅವರ ಮಧುರ ಕಂಠ, ಭಾವಪೂರ್ಣ ಗಾಯನ ಮತ್ತು ಸಂಗೀತದ ಮೇಲಿನ ಅಪಾರ ನಿಷ್ಠೆ… pic.twitter.com/YxVxeqXuQj
— R. Ashoka (@RAshokaBJP) July 11, 2026
ಭಾರತೀಯ ಸಂಗೀತ ಲೋಕದ ದಂತಕಥೆ, ಗಾನ ಕೋಗಿಲೆ ಶ್ರೀಮತಿ ಎಸ್. ಜಾನಕಿ ಅಮ್ಮ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ.
ಸುಮಾರು ಆರು ದಶಕಗಳ ಕಾಲ ಇಪ್ಪತ್ತಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ, ತಮ್ಮ ಸುಮಧುರ ಕಂಠಸಿರಿಯ ಮೂಲಕ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದ ಅವರು, ಕನ್ನಡ ಸೇರಿದಂತೆ ಭಾರತೀಯ… pic.twitter.com/8w4Uf0Oqxo
— Pralhad Joshi (@JoshiPralhad) July 11, 2026
ಗಾನಕೋಗಿಲೆ ಎಸ್ ಜಾನಕಿ ಅಮ್ಮನಿಗೆ ಭಾವಪೂರ್ಣ ಶ್ರದ್ಧಾಂಜಲಿ.
ಜಾನಕಮ್ಮನ ಧ್ವನಿ ಕೇವಲ ಹಾಡಲ್ಲ, ಅದು ನಮ್ಮ ಬದುಕಿನ ಪ್ರತಿಯೊಂದು ಭಾವನೆಗಳ ಸಂಗಾತಿ.
ಪ್ರೀತಿಯ ಹಿತ ನುಡಿ, ವಿರಹದ ನೋವು, ತಾಯಿಯ ಮಮತೆ, ಎಲ್ಲವನ್ನೂ ತಮ್ಮ ಕಂಠದಲ್ಲಿ ಆವಾಹಿಸಿಕೊಂಡಿದ್ದ ದಿವ್ಯ ಶಕ್ತಿ ಅವರದ್ದು.ಕಣ್ಣೀರಿನಲ್ಲೂ ಸಾಂತ್ವನ ಹೇಳಿ, ಸಂತೋಷದಲ್ಲೂ ಜೊತೆಯಾದ ಆ…
— Tejasvi Surya (@Tejasvi_Surya) July 11, 2026
ತಮ್ಮ ಸುಮಧುರ ಹಾಗೂ ಅತಿ ವಿಶಿಷ್ಟವಾದ ಕೋಗಿಲೆ ಕಂಠದ ಮೂಲಕ ದಶಕಗಳ ಕಾಲ ಕೋಟ್ಯಂತರ ಸಂಗೀತ ಪ್ರೇಮಿಗಳ, ಚಲನಚಿತ್ರ ಅಭಿಮಾನಿಗಳ ಹೃದಯವನ್ನು ಆಳಿದ ಪ್ರಖ್ಯಾತ ಹಿನ್ನಲೆ ಗಾಯಕಿ, ಬಹುಭಾಷಾ ಸಂಗೀತ ತಪಸ್ವಿನಿ, ನಮ್ಮ ಹೆಮ್ಮೆಯ 'ಗಾನಕೋಗಿಲೆ' ಶ್ರೀಮತಿ ಎಸ್. ಜಾನಕಿ ಅಮ್ಮನವರು ವಿಧಿವಶರಾದ ಸುದ್ದಿ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ. ಕನ್ನಡ… pic.twitter.com/wrg56NhdNN
— Vijayendra Yediyurappa (@BYVijayendra) July 11, 2026
ಭಾರತೀಯ ಸಂಗೀತ ಲೋಕದ ಪ್ರಸಿದ್ಧ ಗಾಯಕರಾದ ಎಸ್. ಜಾನಕಿ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಗಿದೆ.
5 ದಶಕಗಳಿಗೂ ಹೆಚ್ಚು ಕಾಲ ವಿವಿಧ ಭಾಷೆಗಳಲ್ಲಿ ಸಾವಿರಾರು ಗೀತೆಗಳ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಅವರ ಅಗಲಿಕೆ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಅವರ ಪ್ರತಿಯೊಂದು ಹಾಡುಗಳಿಗೆ ನಾನು ಅಭಿಮಾನಿ.
ದೇವರು ಅವರ ಆತ್ಮಕ್ಕೆ… pic.twitter.com/xmMhu7Cf8l
— Nikhil Kumar (@Nikhil_Kumar_k) July 11, 2026
ಭಾರತೀಯ ಸಂಗೀತ ಲೋಕದ ದಿಗ್ಗಜರು, ತಮ್ಮ ಅಮೋಘ ಕಂಠಸಿರಿಯ ಮೂಲಕ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದ ಖ್ಯಾತ ಗಾಯಕಿ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ.
ಭಾಷೆಗಳ ಗಡಿಗಳನ್ನು ಮೀರಿ ಅವರ ಗಾಯನ ತಲೆಮಾರುಗಳನ್ನು ಬೆಸೆಯಿತು. ಅವರ ಅಪೂರ್ವ ಧ್ವನಿ, ಭಾವಪೂರ್ಣ ಗಾಯನ ಮತ್ತು ಸಂಗೀತಕ್ಕೆ ನೀಡಿದ ಅಪಾರ ಕೊಡುಗೆ ಸದಾ… pic.twitter.com/YkxXl0k195
— Hariprasad.B.K. (@HariprasadBK2) July 11, 2026




