Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

Honnavara News: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ಸಮೀಪದ ಮಾಸ್ತಿಜಡ್ಡಿ ಗ್ರಾಮದಲ್ಲಿನ ಹೊಳೆಯಲ್ಲಿ ನಡೆದಿದೆ.ಮಾಸ್ತಿಜಡ್ಡಿ ಗ್ರಾಮದ ಮದನ ನಾಯ್ಕ(17) ಹಾಗೂ ಹೊನ್ನಾವರದ ಹರ್ಷ ನಾಯ್ಕ(19) ನೀರಿನಲ್ಲಿ ಮುಳಗಿ ಸಾವನ್ನಪ್ಪಿದ ಬಾಲಕರು.

ಹಳ್ಳಕ್ಕೆ ಕಟ್ಟಿದ್ದ ಬಾಂದಾರದಲ್ಲಿ ಈಜಲು ತೆರಳಿದ್ದ ವೇಳೆ 15 ಅಡಿ ಆಳದ ಬಾಂದಿನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಇನ್ನು ಶವ ಶೋಧ ನಡೆಸಿದ ಶ್ರೀ ಮಾರಿಕಾಂಬ ರೆಸ್ಕ್ಯೂ ಟೀಮ್ ನ ಗೋಪಾಲ ಗೌಡ ನೇತೃತ್ವದ ತಂಡ ನೀರಿನಿಂದ ಮೇಲೆತ್ತಿದ್ದಾರೆ.

ಘಟನಾ ಸ್ಥಳಕ್ಕೆ ಬನವಾಸಿ ಠಾಣೆ ಪಿಎಸ್‌ಐ ಮಹಾಂತಪ್ಪ ಕುಂಬಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಶಿರಸಿಗೆ ರವಾನೆ ಮಾಡಿದ್ದಾರೆ. ಘಟನೆ ಸಂಬಂಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author