Gold Rate: ಚಿನ್ನ ಖರೀದಿಸುವವರಿಗೆ ಶುಭ ಸುದ್ದಿ. ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದು, ಶುಕ್ರವಾರ ಗ್ರಾಮ್ಗೆ 70 ರೂಪಾಯಿ ಕಡಿಮೆಯಾಗಿದೆ. ಬೆಳ್ಳಿ ಬೆಲೆಯಲ್ಲೂ ಗ್ರಾಮ್ಗೆ 5 ರೂಪಾಯಿ ಇಳಿಕೆಯಾಗಿದ್ದು, ಆಭರಣ ಖರೀದಿದಾರರಿಗೆ ಕೊಂಚ ನಿರಾಳತೆ ಸಿಕ್ಕಿದೆ.
ಇಂದು 22 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 13,065 ರೂಪಾಯಿಯಾಗಿದ್ದು, 10 ಗ್ರಾಂಗೆ 1,30,650 ರೂಪಾಯಿ ಇದೆ. 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 14,253 ರೂಪಾಯಿ ಹಾಗೂ 10 ಗ್ರಾಂಗೆ 1,42,530 ರೂಪಾಯಿಯಾಗಿದೆ. 18 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ 10,690 ರೂಪಾಯಿಯಾಗಿದೆ.
ಇನ್ನೊಂದೆಡೆ, ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಒಂದು ಗ್ರಾಂ ಬೆಳ್ಳಿ 230 ರೂಪಾಯಿ ಹಾಗೂ 100 ಗ್ರಾಂ ಬೆಳ್ಳಿ 23,000 ರೂಪಾಯಿಗೆ ಮಾರಾಟವಾಗುತ್ತಿದೆ. ಚೆನ್ನೈ, ತಮಿಳುನಾಡು ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಮಾತ್ರ ಬೆಳ್ಳಿ ಬೆಲೆ 100 ಗ್ರಾಂಗೆ 23,500 ರೂಪಾಯಿಯಷ್ಟಿದೆ.
ಒಟ್ಟಾರೆ, ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯ ಪರಿಣಾಮ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನ ಹಾಗೂ ಬೆಳ್ಳಿ ದರಗಳು ಕುಸಿದಿದ್ದು, ಆಭರಣ ಖರೀದಿಸಲು ಮುಂದಾಗಿರುವವರಿಗೆ ಇದು ಕೊಂಚ ನೆಮ್ಮದಿ ತಂದಿದೆ.




