Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ ಎಂದು ಸಂಸತ್ ನುಗ್ಗಲು ಯತ್ನಿಸಿದ್ದರು. ಈ ವೇಳೆ ಗಲಾಟೆ ನಡೆದು ಪೋಲೀಸರು ಲಾಠಿ ಪ್ರಹಾರ ಮಾಡಿದ್ದರು.
ಈ ವೇಳೆ ಹಲವರು ಅಸ್ವಸ್ಥವಾಗಿ ಆಸ್ಪತ್ರೆ ಸೇರಿದ್ದರು. ಈ ಕಾರಣಕ್ಕೆ ಕಾಂಗ್ರೆಸ್ ಇಂದು ಕೇಂದ್ರ ಸರ್ಕಾರದ ವಿರುದ್ಧ ಪ್ರಧಾನ ಮಂತ್ರಿ ನಿವಾಸದ ಎದುರು, ಪ್ರತಿಭಟನೆ ನಡೆಸಿದರು. ಈ ವೇಳೆ ಪೋಲೀಸರು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಲು ಪ್ರಯತ್ನಿಸಿದ್ದು, ರಾಹುಲ್ ಗಾಂಧಿ ನಿರಾಕರಿಸಿದ ಕಾರಣ, ಅವರನ್ನು ಹೊತ್ತೊಯ್ಯುವ ಪರಿಸ್ಥಿತಿ ನಿರ್ಮಾಣವಾಯಿತು. ರಾಹುಲ್ ಜತೆಗೆ ಪ್ರಿಯಾಂಕಾ ವಾದ್ರಾ ಮತ್ತು ಅಖಿಲೇಶ್ ಯಾದವ್ರನ್ನು ಪೋಲೀಸರು ಬಂಧಿಸಿದ್ದಾರೆ.
ಈ ಬಂಧನವನ್ನು ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್ ಖಂಡಿಸಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸಂಸದೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧನಕ್ಕೊಳಪಡಿಸಿರುವುದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ. ದೇಶದ ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನೇ ಬಂಧಿಸುವುದು ಅಘೋಷಿತ ತುರ್ತು ಪರಿಸ್ಥಿತಿ ಅಲ್ಲದೆ ಮತ್ತೇನು? ಎಂದು ಹರಿಪ್ರಸಾಾದ್ ಪ್ರಶ್ನಿಸಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಲಾಠಿ ಬೀಸಿ ಅವರ ಧ್ವನಿಯನ್ನು ಹತ್ತಿಕ್ಕಿದ ಕೇಂದ್ರ ಸರ್ಕಾರ, ಈಗ ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿದ ಪ್ರತಿಪಕ್ಷದ ನಾಯಕರನ್ನೂ ಪೊಲೀಸ್ ಬಲದಿಂದ ಮೌನಗೊಳಿಸಲು ಹೊರಟಿದೆ. ಇದು ಪ್ರಜಾಪ್ರಭುತ್ವದ ಆಡಳಿತವಲ್ಲ; ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ ಎಂದು ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ, ಪೊಲೀಸ್ ಪಡೆಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿಗಳ ಪ್ರಶ್ನೆಗಳಿಂದಲೂ, ರಾಹುಲ್ ಗಾಂಧಿ ಅವರ ಹೋರಾಟದಿಂದಲೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬಂಧನಗಳಿಂದ ಸತ್ಯವನ್ನು ಮುಚ್ಚಲು ಸಾಧ್ಯವಿಲ್ಲ; ಲಾಠಿಗಳಿಂದ ನ್ಯಾಯದ ಧ್ವನಿಯನ್ನು ಶಾಶ್ವತವಾಗಿ ಹತ್ತಿಕ್ಕಲು ಸಾಧ್ಯವಿಲ್ಲ.
ವಿಪಕ್ಷ ನಾಯಕರಾದ ಶ್ರೀ ರಾಹುಲ್ ಗಾಂಧಿ, ಸಂಸದೆ ಶ್ರೀಮತಿ ಪ್ರಿಯಾಂಕಾ ಗಾಂಧಿ ಹಾಗೂ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಬಂಧಿಸಿರುವ ಎಲ್ಲ ನಾಯಕರು ಮತ್ತು ವಿದ್ಯಾರ್ಥಿಗಳನ್ನು ತಕ್ಷಣ ಬೇಷರತ್ತಾಗಿ ಬಿಡುಗಡೆ ಮಾಡಿ. ಕೇಂದ್ರ ಶಿಕ್ಷಣ ಸಚಿವರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತೇನೆ ಎಂದು ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ಶ್ರೀ @RahulGandhi ಹಾಗೂ ಸಂಸದೆ ಶ್ರೀಮತಿ @priyankagandhi ಅವರನ್ನು ದೆಹಲಿ ಪೊಲೀಸರು ಬಂಧನಕ್ಕೊಳಪಡಿಸಿರುವುದು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ.
ದೇಶದ ಲೋಕಸಭೆಯ ವಿರೋಧ ಪಕ್ಷದ ನಾಯಕನನ್ನೇ ಬಂಧಿಸುವುದು ಅಘೋಷಿತ ತುರ್ತು ಪರಿಸ್ಥಿತಿ ಅಲ್ಲದೆ ಮತ್ತೇನು?ವಿದ್ಯಾರ್ಥಿಗಳ ಮೇಲೆ ಅಮಾನುಷವಾಗಿ ಲಾಠಿ ಬೀಸಿ… pic.twitter.com/oXnojABELz
— Hariprasad.B.K. (@HariprasadBK2) July 21, 2026




