Gold Rate: ಚಿನ್ನದ ಬೆಲೆ ಮತ್ತೆ ಏರಿಕೆ ಹಾದಿ ಹಿಡಿದಿದೆ. ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ಚಿನ್ನದ ದರ ಇಂದು ಮತ್ತೊಮ್ಮೆ ಭಾರೀ ಜಿಗಿತ ಕಂಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಸುಮಾರು 2% ಏರಿಕೆ, ಅಮೆರಿಕ-ಇರಾನ್ ನಡುವಿನ ಉದ್ವಿಗ್ನತೆ ಸೇರಿದಂತೆ ಜಾಗತಿಕ ಬೆಳವಣಿಗೆಗಳ ಪರಿಣಾಮವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಗಳಲ್ಲಿ ಏರಿಕೆ ದಾಖಲಾಗಿದೆ.
ಜುಲೈ 22, 2026 ಬುಧವಾರ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹229 ಏರಿಕೆಯಾಗಿದೆ. ಇದರೊಂದಿಗೆ 24 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆ ₹14,651ಕ್ಕೆ ತಲುಪಿದ್ದು, 10 ಗ್ರಾಂ ಚಿನ್ನದ ಬೆಲೆ ₹2,290 ಏರಿಕೆಯಾಗಿ ₹1,46,510ಕ್ಕೆ ಏರಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರದಲ್ಲೂ ಏರಿಕೆ ಕಂಡಿದೆ. ಪ್ರತಿ ಗ್ರಾಂಗೆ ₹210 ಹೆಚ್ಚಳವಾಗಿದ್ದು, 1 ಗ್ರಾಂ ಬೆಲೆ ₹13,430ಕ್ಕೆ ತಲುಪಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹2,100 ಏರಿಕೆಯಾಗಿ ₹1,34,300 ಆಗಿದೆ.
18 ಕ್ಯಾರೆಟ್ ಚಿನ್ನದ ದರದಲ್ಲೂ ಏರಿಕೆ ಮುಂದುವರಿದಿದೆ. 1 ಗ್ರಾಂ ಚಿನ್ನದ ಬೆಲೆ ₹10,988 ಇದ್ದು, 10 ಗ್ರಾಂ ಚಿನ್ನದ ಬೆಲೆ ₹1,09,880 ದಾಖಲಾಗಿದೆ. ರಾಜಧಾನಿ ಬೆಂಗಳೂರಿನಲ್ಲೂ ಇದೇ ದರ ಜಾರಿಯಲ್ಲಿದ್ದು, 24 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆ ₹14,651 ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಕೂಡ ಭಾರೀ ಏರಿಕೆ ಕಂಡಿದೆ. ಒಂದು ಕೆಜಿ ಬೆಳ್ಳಿ ಬೆಲೆ ಇಂದು ₹5,000 ಹೆಚ್ಚಳವಾಗಿ ₹2,40,000ಕ್ಕೆ ತಲುಪಿದೆ. ಪ್ರತಿ ಗ್ರಾಂ ಬೆಳ್ಳಿ ಬೆಲೆ ₹240 ಆಗಿದೆ.
ಜಾಗತಿಕ ಆರ್ಥಿಕ ಅನಿಶ್ಚಿತತೆ ಹಾಗೂ ಸುರಕ್ಷಿತ ಹೂಡಿಕೆಯತ್ತ ಹೂಡಿಕೆದಾರರು ಮುಖ ಮಾಡುವುದರಿಂದ ಮುಂದಿನ ದಿನಗಳಲ್ಲೂ ಚಿನ್ನ-ಬೆಳ್ಳಿ ಬೆಲೆಗಳಲ್ಲಿ ಏರಿಳಿತ ಮುಂದುವರಿಯುವ ಸಾಧ್ಯತೆ ಇದೆ.




