Hubli : ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ: ಓರ್ವ ಸಾ*, ಚಾಲಕ ಪೊಲೀಸರ ವಶಕ್ಕೆ

Hubli News: ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂದಿನಿಂದ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ.

ಹುಬ್ಬಳ್ಳಿಯ ಶಿಮ್ಲಾ ನಗರದ ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 40 ವರ್ಷದ ಮಹಬೂಬ್ ಅಲಿ ಶೇಖ್ ಎಂಬ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಬೂಬ್ ಅಲಿ ಶೇಖ್ ಅವರು ರಸ್ತೆಗೆ ಬಿದ್ದು, ಅಪಘಾತದ ತೀವ್ರತೆಗೆ ದೇಹ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ದಕ್ಷಿಣ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವಾದ ಟ್ರಕ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

About The Author