ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಹೊಸ ಚರ್ಚೆ – ಮುಂದಿನ ಶಿಕ್ಷಣ ಸಚಿವ ಯಾರು?

ರಾಷ್ಟ್ರೀಯ ರಾಜಕೀಯದಲ್ಲಿ ನೀಟ್ ಪರೀಕ್ಷಾ ವಿವಾದದ ಕಿಚ್ಚು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ವಿವಾದದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದು ಈಗ ದೇಶಾದ್ಯಂತ ಭಾರೀ ಸಂಚಲನ ಸೃಷ್ಟಿಸಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಉಗ್ರ ಪ್ರತಿಭಟನೆ ಹಾಗೂ ವಿಪಕ್ಷಗಳ ತೀವ್ರ ಒತ್ತಡಕ್ಕೆ ಮಣಿದು ಪ್ರಧಾನ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿಗೆ ಸಲ್ಲಿಸಿದ್ದಾರೆ.

ಪ್ರಧಾನ್ ಅವರ ರಾಜೀನಾಮೆಯನ್ನು ಪ್ರತಿಭಟನಾಕಾರರು ಸ್ವಾಗತಿಸಿದ್ದರೂ, ಸಿಜೆಪಿ ಸಂಸ್ಥಾಪಕ ಅಭಿಜಿತ್ ದಿಪ್ಕೆ ಎಚ್ಚರಿಕೆ ನೀಡಿದ್ದಾರೆ. ‘ಕಾಕ್ರೋಚ್ ಜೊತೆ ಆಟವಾಡಬೇಡಿ’ ಎಂದು ಹೇಳಿರುವ ಅವರು, ಪರೀಕ್ಷಾ ಅಕ್ರಮದ ವೇಳೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಎಲ್ಲಾ ಕಾನೂನು ಕೇಸ್‌ಗಳನ್ನು ವಾಪಸ್ ಪಡೆಯುವವರೆಗೆ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ರಾಜಕೀಯ ಬಿರುಗಾಳಿಯ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವಾಲಯದ ಮುಂದಿನ ಚುಕ್ಕಾಣಿ ಯಾರ ಕೈ ಸೇರಲಿದೆ ಎಂಬ ಕುರಿತು ದೆಹಲಿ ವಲಯದಲ್ಲಿ ತೀವ್ರ ಚರ್ಚೆ ಆರಂಭವಾಗಿದೆ. ಮಹಾರಾಷ್ಟ್ರದ ಕಲ್ಯಾಣ್ ಲೋಕಸಭಾ ಕ್ಷೇತ್ರದ ಸಂಸದ ಹಾಗೂ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಅವರು ಮುಂದಿನ ಕೇಂದ್ರ ಶಿಕ್ಷಣ ಸಚಿವರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂಬ ಬಲವಾದ ಸುದ್ದಿಗಳು ಹರಿದಾಡುತ್ತಿವೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹಾಗೂ ಏಕನಾಥ್ ಶಿಂಧೆ ಅವರು ಈಗಾಗಲೇ ದೆಹಲಿಗೆ ದೌಡಾಯಿಸಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸುತ್ತಿದ್ದಾರೆ. ಶಿವಸೇನೆಯ ಸಂಸಕರನ್ನು ಪಕ್ಷದ ಕಡೆ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಶ್ರೀಕಾಂತ್ ಶಿಂಧೆ ಅವರಿಗೆ ಈಗ ಕೇಂದ್ರ ಸಂಪುಟದಲ್ಲಿ ಮಂತ್ರಿಗಿರಿ ಒಲಿಯಲಿದೆಯಾ ಎಂಬುದು ಸದ್ಯದ ಅತಿ ದೊಡ್ಡ ಸಸ್ಪೆನ್ಸ್ ಆಗಿದೆ.

ಒಟ್ಟಿನಲ್ಲಿ, ಧರ್ಮೇಂದ್ರ ಪ್ರಧಾನ್ ನಿರ್ಗಮನದ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆಗಳು ಆಗುವ ಸಾಧ್ಯತೆಯಿದ್ದು, ಶಿಕ್ಷಣ ಸಚಿವಾಲಯದ ಹೊಸ ನಾಯಕ ಯಾರೆಂಬುದು ಕೆಲವೇ ದಿನಗಳಲ್ಲಿ ಅಧಿಕೃತವಾಗುವ ನಿರೀಕ್ಷೆಯಿದೆ. ಇದರೊಂದಿಗೆ ಕಾಕ್ರೋಚ್ ಜನತಾ ಪಾರ್ಟಿಯ ಮುಂದಿನ ನಡೆಗಳು ಕೂಡ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ.

About The Author