Political News: ಪ್ರಹ್ಲಾದ್ ಜೋಶಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ

Political News: ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಕೇಂದ್ರ ಆಹಾರ, ಗ್ರಾಹಕ ವ್ಯವಹಾರ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿ ವಹಿಸಲಾಗಿದೆ.

ಕೇಂದ್ರ ಸರ್ಕಾರ ಮಹತ್ವದ ಆಡಳಿತಾತ್ಮಕ ನಿರ್ಧಾರ ಕೈಗೊಂಡಿದ್ದು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಜವಾಬ್ದಾರಿಯನ್ನು ನೀಡಿದೆ.

ಈ ಮೂಲಕ ದೇಶದ ಶಿಕ್ಷಣ ಇಲಾಖೆಯ ಜವಾಬ್ದಾರಿಯನ್ನೂ ಪ್ರಹ್ಲಾದ್ ಜೋಶಿ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ನೀಟ್ ಪರೀಕ್ಷೆ, ಶಿಕ್ಷಣ ನೀತಿ ಹಾಗೂ ವಿದ್ಯಾರ್ಥಿ ಹಿತಾಸಕ್ತಿ ಸಂಬಂಧಿತ ಹಲವು ವಿಚಾರಗಳು ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿರುವ ನಡುವೆಯೇ ಈ ಬೆಳವಣಿಗೆ ಮಹತ್ವ ಪಡೆದಿದೆ.

ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪ್ರಹ್ಲಾದ್ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆ ನೀಡಿರುವುದು ರಾಜ್ಯಕ್ಕೂ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ನಿರೀಕ್ಷೆಗಳು ಮೂಡಿವೆ.

About The Author