Political News: ನೀಟ್ ಪರೀಕ್ಷೆ ಪ್ರತಿಭಟನೆ ವೇಳೆ ಉಮರ್ ಖಾಲೀದ್ ಪರ ಘೋಷಣೆ ಕೂಗಿದ್ದನ್ನು ವಿರೋಧಿಸಿ ಮಾತನಾಡಿದ್ದ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ನೋಟೀಸ್ ಜಾರಿ ಮಾಡಲಾಗಿದೆ.
ಈ ವಿರುದ್ಧ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬೇಸರ ವ್ಯಕ್ತಪಡಿಸಿರುವ ಕಾರ್ಕಳ ಶಾಸಕ ಸುನೀಲ್ ಕುಮಾರ್, ಮಾಜಿ ಸಚಿವ ಸಿ.ಟಿ.ರವಿಯವರಿಗೆ ನೋಟಿಸ್ ನೀಡಲು ಹೋದ ರಾಜ್ಯ ಪೊಲೀಸ್ ಇಲಾಖೆಯ ಕ್ರಮವನ್ನು ಉಗ್ರವಾಗಿ ಖಂಡಿಸುತ್ತೇನೆ. ಪೊಲೀಸರ ಕಾರ್ಯ ವೈಖರಿ ಬಗ್ಗೆ ಖುದ್ದು ರಾಜ್ಯ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ನಂತರವೂ ಖಾಕಿಧಾರಿಗಳು ಆಳುವ ಸರ್ಕಾರದ ಆಳುಗಳಾಗಿ ವಿರೋಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಿ.ಟಿ.ರವಿ ಅವರ ವಿರುದ್ಧ ನಡೆಸುವ ಯಾವುದೇ ದುರುದ್ದೇಶಪೂರಿತ ಕ್ರಮವನ್ನು ಸಹಿಸುವುದಕ್ಕೆ ಸಾಧ್ಯವೇ ಇಲ್ಲ ಎಂದು ಸುನೀಲ್ ಕುಮಾರ್ ಕಿಡಿಕಾರಿದ್ದಾರೆ.
ಮಾಜಿ ಸಚಿವ @CTRavi_BJP ಯವರಿಗೆ ನೋಟಿಸ್ ನೀಡಲು ಹೋದ ರಾಜ್ಯ ಪೊಲೀಸ್ ಇಲಾಖೆಯ ಕ್ರಮವನ್ನು ಉಗ್ರವಾಗಿ ಖಂಡಿಸುತ್ತೇನೆ. ಪೊಲೀಸರ ಕಾರ್ಯ ವೈಖರಿ ಬಗ್ಗೆ ಖುದ್ದು ರಾಜ್ಯ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದ ನಂತರವೂ ಖಾಕಿಧಾರಿಗಳು ಆಳುವ ಸರ್ಕಾರದ ಆಳುಗಳಾಗಿ ವಿರೋಧಿ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಸಿ.ಟಿ.ರವಿ ಅವರ ವಿರುದ್ಧ…
— Sunil Kumar Karkala (@karkalasunil) July 26, 2026




