Hubli News: ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿ ಹುಬ್ಬಳ್ಳಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು ಘೋಷಣೆ ಕೂಗಿದ್ದಾರೆ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಖಂಡಿಸಿರುವ ಮುಖಂಡರು, ಮುಂದೆಯೂ ಷಡ್ಯಂತ್ರ ನಡೆಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಿ. ನಾಗೇಂದ್ರ ಅವರ ಪರ ಘೋಷಣೆ ಕೂಗಿದ ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಹಿತಾಭಿವೃದ್ಧಿ ಸಂಘದ ಮುಖಂಡರು, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಾಗೇಂದ್ರ ಅವರು ವಾಲ್ಮೀಕಿ ಸಮುದಾಯದ ಹಿತದೃಷ್ಟಿಯಿಂದ ನೈತಿಕವಾಗಿ ಸಹಕಾರ ನೀಡಿದ್ದಾರೆ ಎಂದು ಹೇಳಿದರು.
ವಿರೋಧ ಪಕ್ಷಗಳು ಆರೋಪ ಮಾಡುವುದು ಸಹಜ. ಆದರೆ ನಾಗೇಂದ್ರ ಅವರ ವಿರುದ್ಧ ಅನಗತ್ಯವಾಗಿ ಆರೋಪ ಮಾಡುವುದು ಸರಿಯಲ್ಲ. ಸಮುದಾಯದ ಪರವಾಗಿ ನಾಗೇಂದ್ರ ಅವರಿಗೆ ಬೆಂಬಲ ಮುಂದುವರಿಯಲಿದೆ ಎಂದು ಮುಖಂಡರು ಹೇಳಿದರು.
ಮುಂದಿನ ದಿನಗಳಲ್ಲಿ ಬಿ. ನಾಗೇಂದ್ರ ಅವರ ವಿರುದ್ಧ ಯಾವುದೇ ರೀತಿಯ ಷಡ್ಯಂತ್ರ ನಡೆಸಿದರೆ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಸಮುದಾಯವನ್ನು ಒಗ್ಗೂಡಿಸಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದ್ದಾರೆ.




