Haveri News: ಹಿಂದೂ ಜಾಗರಣ ವೇದಿಕೆ ವತಿಯಿಂದ ಹಾನಗಲ್ ಪಟ್ಟಣದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.
ಪಟ್ಟಣದ ಕನಕವೃತ್ತದಿಂದ ಆರಂಭಗೊಂಡ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಾಗುತ್ತಾ ಛತ್ರಪತಿ ಶಿವಾಜಿ ಕಲ್ಯಾಣ ಮಂಟಪದವರೆಗೆ ನಡೆಯಿತು. ಪಂಜಿನ ಮೆರವಣಿಗೆಯಲ್ಲಿ ನೂರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಕಳೆದುಕೊಂಡಿರುವ ಭೂಮಿಯನ್ನು ಮರಳಿ ಪಡೆಯುವ ಸಂಕಲ್ಪದೊಂದಿಗೆ ಮೆರವಣಿಗೆ ನಡೆಸಲಾಯಿತು ಎಂದು ಆಯೋಜಕರು ತಿಳಿಸಿದ್ದಾರೆ. ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.
ಪಂಜಿನ ಮೆರವಣಿಗೆಯಿಂದ ಹಾನಗಲ್ ಪಟ್ಟಣದಲ್ಲಿ ಕೆಲಕಾಲ ಗಮನ ಸೆಳೆಯುವ ವಾತಾವರಣ ನಿರ್ಮಾಣವಾಗಿತ್ತು.




