ಸವದಿ ಜೊತೆ ಭಿನ್ನಮತವಿದೆಯಾ? ಕೊನೆಗೂ ಕ್ಲಾರಿಟಿ ಕೊಟ್ಟ ಸತೀಶ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕರ ನಡುವಿನ ಭಿನ್ನಮತ ಹಾಗೂ ಒಗ್ಗಟ್ಟಿನ ಮಾತುಗಳು ಮುನ್ನೆಲೆಗೆ ಬಂದಿವೆ. ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ವೈಯಕ್ತಿಕ ಭಿನ್ನಾಭಿಪ್ರಾಯಗಳಿದ್ದರೂ, ಪಕ್ಷದ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡುವುದು ಅನಿವಾರ್ಯ ಅಂತ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹೌದು, ರಾಜಕೀಯದಲ್ಲಿ ನಾಯಕರ ನಡುವೆ ಸಣ್ಣಪುಟ್ಟ ಭಿನ್ನಮತಗಳು ಬರೋದು ಸಹಜ, ಯಾರು ಕೂಡ ಸದಾ ಸ್ನೇಹಿತರಾಗಲಿ ಅಥವಾ ವಿರೋಧಿಗಳಾಗಲಿ ಇರುವುದಿಲ್ಲ ಅಂತ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಲಕ್ಷ್ಮಣ ಸವದಿ ಮತ್ತು ತಾವು ಒಂದೇ ಪಕ್ಷದವರಾಗಿರುವುದರಿಂದ, ಪಕ್ಷದ ಹಿತದೃಷ್ಟಿಯಿಂದ ಒಗ್ಗಟ್ಟಿನ ಹೆಜ್ಜೆ ಇಡುವುದು ಅನಿವಾರ್ಯ ಎಂದಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಅಂತ ಜಾರಕಿಹೊಳಿ ತಿಳಿಸಿದ್ದಾರೆ. ಇನ್ನು ಇದೇ ವೇಳೆ ಸಕ್ಕರೆ ಕಾರ್ಖಾನೆಗಳ ವಿಚಾರದ ಬಗ್ಗೆಯೂ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾರ್ಖಾನೆಗಳು ಜಾಸ್ತಿಯಾದರೆ ಕಬ್ಬು ನುರಿಸುವ ಹಂಗಾಮಿಗೆ ತೊಂದರೆಯಾಗಬಹುದು. ಸದ್ಯ ಇರುವ 15 ಕಿ.ಮೀ ಕನಿಷ್ಠ ಅಂತರವನ್ನು 25 ಕಿ.ಮೀಗೆ ವಿಸ್ತರಿಸುವ ಬಗ್ಗೆ ಸರ್ಕಾರ ಶೀಘ್ರದಲ್ಲೇ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಅಂತ ತಿಳಿಸಿದ್ದಾರೆ.

ಒಟ್ಟಿನಲ್ಲಿ ಭಿನ್ನಮತವಿದ್ದರೂ ಪಕ್ಷದ ಹಿತಕ್ಕಾಗಿ ಎಲ್ಲರೂ ಒಂದಾಗಿ ಹೋಗಬೇಕು ಎಂಬ ಸತೀಶ್ ಜಾರಕಿಹೊಳಿ ಅವರ ಮಾತುಗಳು ಈಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

About The Author