Political News: ಬಿಜೆಪಿ ನಾಯಕ, ರಾಜ್ಯದ ಮಾಜಿ ಶಿಕ್ಷಣ ಬಿ.ಸಿ.ನಾಗೇಶ್ ತಮ್ಮ 67ನೇ ವಯಸ್ಸಿನಲ್ಲಿ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ನಾಗೇಶ್ ಅವರಿಗೆ ಬ್ರೇನ್ ಟ್ಯೂಮರ್ ಇದ್ದು, ಹಲವು ದಿನಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ ಚಿಕಿತ್ಸೆ ಫಲಿಸದೇ, ನಾಗೇಶ್ ನಿಧನರಾಗಿದ್ದಾರೆ.
ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ನಾಗೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ, ನಿನ್ನೆ ರಾತ್ರಿ ಮಗಳ ಮನೆಯಲ್ಲಿಯೇ ನಿಧನರಾಗಿದ್ದಾರೆ. ಇಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ತುಮಕೂರಿನ ಅವರ ಸ್ವಗೃಹದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಇನ್ನು ನಾಗೇಶ್ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ, ಹಾಲಿ ಸಿಎಂ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ಆರ್.ಅಶೋಕ್, ಕೇಂದ್ರ ಸಚಿವ ಕುಮಾರಸ್ವಾಮಿ ಸೇರಿ ಹಲವು ಗಣ್ಯರು ನಾಗೇಶ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
