Haveri News: ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಎಂದೇ ಖ್ಯಾತರಾದ ದಿ. ಡಿ. ದೇವರಾಜ ಅರಸು ಅವರ ಜನ್ಮದಿನದ ಅಂಗವಾಗಿ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ರೈತ ಮುಖಂಡ ಹನುಮಂತಪ್ಪ ಕಬ್ಬಾರ ಅವರು ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಬಾಳೆಹಣ್ಣು ಹಾಗೂ ತಿಂಡಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಹನುಮಂತಪ್ಪ ಕಬ್ಬಾರ, ಡಿ. ದೇವರಾಜ ಅರಸು ಅವರು ಸಾಮಾಜಿಕ ನ್ಯಾಯ, ಬಡವರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಜನಪರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಅವರ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

