Dharwad News: ಧಾರವಾಡದಲ್ಲಿ ಭೀಕರ ಹ*: 25 ವರ್ಷದ ಯುವಕನ ಜೀವನ ಅಂತ್ಯ.

Dharwad News: ಧಾರವಾಡದಲ್ಲಿ ಭೀಕರ ಕೊಲೆ ನಡೆದಿದೆ. ವ್ಯಕ್ತಿಯೊಬ್ಬರ ಕತ್ತು ಸೀಳಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಗರದ ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿದೆ. ಲಕ್ಷ್ಮಿ ಸಿಂಗನಕೇರಿ ನಿವಾಸಿ 25 ವರ್ಷದ ಹನುಮಂತ ಅಣ್ಣಿಗೇರಿ ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಟೋಲ್ ನಾಕಾ ಬಳಿಯ ಐನಾಕ್ಸ್ ಸಮೀಪ ನಡೆದಿರುವ ಈ ಭೀಕರ ಘಟನೆ ಧಾರವಾಡದಲ್ಲಿ ಆತಂಕಕ್ಕೆ ಕಾರಣವಾಗಿದೆ. ಲಕ್ಷ್ಮಿ ಸಿಂಗನಕೇರಿ ನಿವಾಸಿ ಹನುಮಂತ ಅಣ್ಣಿಗೇರಿ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಕತ್ತು ಸೀಳಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಕೊಲೆಗೆ ನಿಖರ ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ವೈಯಕ್ತಿಕ ದ್ವೇಷವೇ, ಹಳೆಯ ವೈಷಮ್ಯವೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ವಿದ್ಯಾಗಿರಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸುವ ಪ್ರಕ್ರಿಯೆ ನಡೆಸಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

About The Author