Koppala News: ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಮೂರನೇ ದಿನವೂ ಹೋರಾಟ

Koppala News: ಕೊಪ್ಪಳ: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಜಿಲ್ಲಾಡಳಿತ ಭವನದ ಮುಂದೆ ನಡೆಯುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಸಚಿವ ಬಿ. ನಾಗೇಂದ್ರ ಅವರ ವಿರುದ್ಧ 189 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ
ವಿವಿಧ ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಕೂಡಲೇ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಹೋರಾಟದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ್, ಸಂಸದೆ ಹೇಮಲತಾ ನಾಯಕ್, ಡಾ. ಬಸವರಾಜ್ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರತಿಭಟನಾಕಾರರು ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಘೋಷಣೆಗಳನ್ನು ಕೂಗಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಸಂಸದೆ ಹೇಮಲತಾ ನಾಯಕ್ ಮತ್ತು ಬಿಜೆಪಿ ಮುಖಂಡರು ಡಾಕ್ಟರ್ ಬಸವರಾಜ್ ವಾಲ್ಮೀಕಿ ಅಭಿವೃದ್ಧಿ ನಿಗಮದ 189 ಕೋಟಿ ಹಣವನ್ನು ಬಳ್ಳಾರಿ ಮತ್ತು ಕಲಬುರ್ಗಿ ಎಂಪಿ ಚುನಾವಣೆ ವೇಳೆ ಮೋಜು,ಮಸ್ತಿಗಾಗಿ ದುರ್ಬಳಕೆ ಮಾಡಿಕೊಂಡು ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದರು.
ಇನ್ನು ಹೋರಾಟ ಮೂರನೇ ದಿನವೂ ಮುಂದುವರಿದಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಭವನದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಒಟ್ಟಾರೆ, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಹೋರಾಟ ಇದೀಗ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಪ್ರತಿಭಟನೆ ಯಾವ ಸ್ವರೂಪ ಪಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

About The Author