ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ, ಈಗ ಮಾಜಿ ಸಿಎಂ ಸಿದ್ದರಾಮಯ್ಯ ಅವರ, ತವರು ಜಿಲ್ಲೆ ಮೈಸೂರಿನಲ್ಲೂ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ KIADB ಹೊರಡಿಸಿರುವ ಅಧಿಸೂಚನೆಗೆ ರೈತರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ಅದರ ಕುರಿತ ವಿಸ್ತೃತ ವರದಿ ಈ ವಿಡಿಯೋದಲ್ಲಿದೆ ನೋಡಿ.ಲ್ಲೇ ಮೈಸೂರು ಜಿಲ್ಲೆಯಲ್ಲೂ ರೈತರ ಕೃಷಿ ಭೂಮಿಗೆ ಕುತ್ತು ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ‘ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ, ಕೈಗಾರಿಕಾ ಉದ್ದೇಶಕ್ಕಾಗಿ ಬರೋಬ್ಬರಿ 165 ಎಕರೆ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಪ್ರಾಥಮಿಕ ಅಧಿಸೂಚನೆ’ ಹೊರಡಿಸಿದೆ ಎಂದು ತಿಳಿದುಬಂದಿದೆ.
ಮೈಸೂರು ವಿಮಾನ ನಿಲ್ದಾಣದ ಸಮೀಪವಿರುವ ಈ ಪ್ರದೇಶದಲ್ಲಿ ರೈತರು ಅಡಕೆ, ಬಾಳೆ, ತೆಂಗು ಮತ್ತು ಭತ್ತದಂತಹ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆದು ಸಮೃದ್ಧವಾಗಿ ಜೀವನ ಸಾಗಿಸುತ್ತಿದ್ದಾರೆ. ಜೀವನಕ್ಕೆ ಏಕೈಕ ಆಧಾರವಾಗಿರುವ ಇಂತಹ ಫಲವತ್ತಾದ ಭೂಮಿಯನ್ನು ಕೈಗಾರಿಕೆಗಳಿಗಾಗಿ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಸಮೀಪದ ಬಿಡದಿಯಲ್ಲಿ ನಡೆದ ಭೂಸ್ವಾಧೀನ ವಿರೋಧಿ ಚಳವಳಿಯ ಮಾದರಿಯಲ್ಲೇ, ಈಗ ಮೈಸೂರಿನಲ್ಲೂ ಕೂಡ ಬೃಹತ್ ಹೋರಾಟವನ್ನು ರೂಪಿಸಲು ರೈತ ಸಂಘಟನೆಗಳು ಮತ್ತು ಭೂಮಾಲೀಕರು ಈಗಿನಿಂದಲೇ ಸಜ್ಜಾಗುತ್ತಿದ್ದಾರೆ ಎನ್ನುವ ಅಂಶ ಬೆಳಕಿಗೆ ಬಂದಿದೆ.
ತಮ್ಮದೇ ಸ್ವಕ್ಷೇತ್ರದಲ್ಲಿ ಅನ್ನದಾತರ ವಿರೋಧ ಹಾಗೂ ಸಂಭಾವ್ಯ ಹೋರಾಟವನ್ನು ಎದುರಿಸಲು ಸರ್ಕಾರ ಯಾವ ರೀತಿಯ ಹೆಜ್ಜೆ ಇಡಲಿದೆ ಮತ್ತು ರೈತರ ಆಕ್ರೋಶಕ್ಕೆ ಯಾವ ಪರಿಹಾರ ಸಿಗಲಿದೆ ಎಂಬುದು ಸದ್ಯ ರಾಜ್ಯ ರಾಜಕಾರಣದಲ್ಲಿ ಹೆಚ್ಚು ಕುತೂಹಲ ಮೂಡಿಸಿದೆ.
