Koppala: ಕೊಪ್ಪಳದಲ್ಲಿ ಸಂಭ್ರಮದ ಈದ್ ಮಿಲಾದ್ ಆಚರಣೆ

Koppala: ಕೊಪ್ಪಳ :ಮುಸ್ಲಿಂ ಸಮುದಾಯದ ಪವಿತ್ರ ಹಬ್ಬಗಳಲ್ಲಿ ಒಂದಾದ ಈದ್ ಮಿಲಾದ್ ಹಬ್ಬವನ್ನು ಕೊಪ್ಪಳ ಜಿಲ್ಲೆಯಲ್ಲಿ ಇಂದು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಹಬ್ಬದ ಅಂಗವಾಗಿ ಜಿಲ್ಲೆಯ ವಿವಿಧೆಡೆ ಮುಸ್ಲಿಂ ಧರ್ಮಗುರುಗಳು, ಸಮುದಾಯದ ಮುಖಂಡರು ಹಾಗೂ ಅಪಾರ ಸಂಖ್ಯೆಯ ಸಮುದಾಯದ ಯುವಕರು ಪಾಲ್ಗೊಂಡಿದ್ದರು.

ವಿಶೇಷವಾಗಿ ಚಿಕ್ಕ ಚಿಕ್ಕ ಮಕ್ಕಳು ಇಸ್ಲಾಂ ಧರ್ಮದ ಬಾವುಟಗಳನ್ನು ಹಿಡಿದು ಸಂಭ್ರಮಿಸುತ್ತಾ, ಹಬ್ಬದ ವಾತಾವರಣಕ್ಕೆ ಮತ್ತಷ್ಟು ಮೆರುಗು ತಂದರು.

ಇನ್ನು ಯುವಕರು ಧಾರ್ಮಿಕ ಗೀತೆಗಳಿಗೆ ಹೆಜ್ಜೆ ಹಾಕುತ್ತಾ, ಸಂತಸ ಹಂಚಿಕೊಂಡರು. ವಿವಿಧೆಡೆ ನಡೆದ ಕಾರ್ಯಕ್ರಮಗಳಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವದ ಸಂದೇಶ ಸಾರಲಾಯಿತು.

ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಭದ್ರತಾ ವ್ಯವಸ್ಥೆಯನ್ನೂ ಕೈಗೊಳ್ಳಲಾಗಿತ್ತು.

ಒಟ್ಟಾರೆ, ಕೊಪ್ಪಳ ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಮುಸ್ಲಿಂ ಸಮುದಾಯದವರು ಶಾಂತಿಯುತವಾಗಿ, ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು.

About The Author