UttaraKannada: ಯಲ್ಲಾಪುರ: ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಬುಧವಾರ ಎರಡು ಸಾರಿಗೆ ಬಸ್ಗಳು ಮುಖಾಮುಖಿ ಡಿಕ್ಕಿಯಾಗಿ ಬಸ್ ಚಾಲಕ ಸೇರಿದಂತೆ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಅಪಘಾತದಲ್ಲಿ ಗಾಯಗೊಂಡು ಯಲ್ಲಾಪುರ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳನ್ನು ಶಾಸಕ ಶಿವರಾಮ ಹೆಬ್ಬಾರ್ ಅವರು ಗುರುವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಗಾಯಾಳುಗಳಿಗೆ ಧೈರ್ಯ ತುಂಬಿದ ಅವರು, ಅಗತ್ಯ ವೈದ್ಯಕೀಯ ಚಿಕಿತ್ಸೆ ಹಾಗೂ ಸೂಕ್ತ ಆರೈಕೆ ನೀಡುವಂತೆ ವೈದ್ಯರಿಗೆ ಸೂಚಿಸಿದರು.
ಅಪಘಾತದಲ್ಲಿ ಗಾಯಗೊಂಡಿರುವ ಎಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ಶಾಸಕ ಶಿವರಾಮ ಹೆಬ್ಬಾರ್ ಹಾರೈಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವಿಜಯ ಮಿರಾಶಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮುಂಡಗೋಡ ತಾಲ್ಲೂಕಿನ ಶಿಡ್ಲಗುಂಡಿ ಗ್ರಾಮದಲ್ಲಿ ಎರಡು ಸಾರಿಗೆ ಬಸ್ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡವರನ್ನು ಶಾಸಕ ಶಿವರಾಮ ಹೆಬ್ಬಾರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.
