ಕರೊನಾ ಲಸಿಕೆ ವಿಚಾರದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ಆಕ್ಸ್‌ಫರ್ಡ್ ವಿವಿ ಕೋವಿಡ್ ವ್ಯಾಕ್ಸಿನ್ ತಯಾರಿಕೆಗೆ ತಾತ್ಕಾಲಿಕ ತಡೆ ಬಿದ್ದಿದೆ.ಯುನೈಟೆಡ್ ಕಿಂಗ್ಡಮ್ನಲ್ಲಿ ಕರೊನಾ ವ್ಯಾಕ್ಸಿನ್ ಹಾಕಿಸಿಕೊಂಡ ವ್ಯಕ್ತಿಗೆ ಅಡ್ಡಪರಿಣಾಮ ಉಂಟಾದ್ದರಿಂದ ಲಸಿಕೆ ತಯಾರಿಕೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಆಕ್ಸ್‌ಫರ್ಡ್ ಮತ್ತು ಅಸ್ಟ್ರಾಜೆನೆಕಾ ಜಂಟಿಯಾಗಿ ಅಭಿವೃದ್ಧಿ ಪಡಿಸಿದ AZD1222 ಹೆಸರಿನ ಲಸಿಕೆ ಪ್ರಯೋಗ ವಿಶ್ವದ ಹಲವೆಡೆ ನಡೆಯುತ್ತಿದೆ. ಪ್ರಾಥಮಿಕ ಹಂತದ ಪರೀಕ್ಷೆಯಲ್ಲಿ ಆಕ್ಸ್‌ಫರ್ಡ್ ವಿವಿ ಲಸಿಕೆ ಯಶಸ್ಸನ್ನ ಕಂಡಿತ್ತು. ಹೀಗಾಗಿ ಈ ಲಸಿಕೆ ಮೇಲೆ ಇಡೀ ವಿಶ್ವವೇ ವಿಶ್ವಾಸವನ್ನಿಟ್ಟಿತ್ತು.