ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳಿಗೆ ಇಲ್ಲಿದೆ ಒಂದು ದೊಡ್ಡ ಸುವರ್ಣಾವಕಾಶ. ಹೌದು ‘ಸಾರ್ವಜನಿಕ ವಲಯದ ಪ್ರತಿಷ್ಠಿತ ಬ್ಯಾಂಕ್‌ಗಳಲ್ಲಿ ಒಂದಾದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಬೃಹತ್ ಸಂಖ್ಯೆಯ ಸ್ಪೆಷಲಿಸ್ಟ್ ಮತ್ತು ಜನರಲಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.
ಈ ಬೃಹತ್ ನೇಮಕಾತಿ ಅಭಿಯಾನದ ಮೂಲಕ ಒಟ್ಟು 291 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 15ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಿದೆ. ಖಾಲಿ ಇರುವ ಹುದ್ದೆಗಳ ವಿವರ ನೋಡುವುದಾದರೆ; ಪ್ರಮುಖವಾಗಿ 100 ಶಾಖಾ ನಿರ್ವಹಣಾ ಮ್ಯಾನೇಜರ್ ಹುದ್ದೆಗಳು, 75 ಐಟಿ ಮ್ಯಾನೇಜರ್ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳು, 50 ಕ್ರೆಡಿಟ್ ಮ್ಯಾನೇಜರ್ ಹಾಗೂ 25 ಸೆಕ್ಯುರಿಟಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಲಭ್ಯವಿವೆ.
ಇವುಗಳ ಜೊತೆಗೆ ಡೇಟಾಬೇಸ್ ಅಡ್ಮಿನಿಸ್ಟ್ರೇಟರ್, ಮಾಹಿತಿ ಭದ್ರತೆ, ರಿಸ್ಕ್ ಸೀನಿಯರ್ ಮ್ಯಾನೇಜರ್ ಮತ್ತು ಸೈಬರ್ ಸೆಕ್ಯುರಿಟಿ ವಿಭಾಗದ ಇತರೆ ಹುದ್ದೆಗಳನ್ನು ಕೂಡ ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಬಿ.ಇ, ಬಿ.ಟೆಕ್, ಎಂಬಿಎ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಇದರೊಂದಿಗೆ ಸಂಬಂಧಿತ ಕ್ಷೇತ್ರದಲ್ಲಿ ಅಗತ್ಯ ಮುಂಚಿತ ಅನುಭವವೂ ಕಡ್ಡಾಯವಾಗಿದೆ.
ಅಭ್ಯರ್ಥಿಗಳ ವಯೋಮಿತಿ ಸಾಮಾನ್ಯವಾಗಿ 25 ರಿಂದ 45 ವರ್ಷಗಳ ನಡುವೆ ಇರಲಿದ್ದು, ನಿಯಮಾನುಸಾರ ಮೀಸಲಾತಿ ವರ್ಗದವರಿಗೆ ವಯೋಸಡಿಲಿಕೆ ಸಿಗಲಿದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಆನ್‌ಲೈನ್ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ನೆರವೇರಿಸುವ ಸಂದರ್ಶನ ಇರಲಿದೆ. ಅಂತಿಮವಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ಆರಂಭಿಕ ಮೂಲ ವೇತನ ರೂ. 48,480 ರಿಂದ ರೂ. 1,05,280 ರವರೆಗೆ ದೊರೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಗಮನಿಸಿ.

