ಈ ಜಿಲ್ಲೆಯಲ್ಲಿ ಪೆಟ್ರೋಲ್ ದುಬಾರಿ – ಇಂಧನ ಬೆಲೆಯಲ್ಲಿ ಬದಲಾವಣೆ!

ದಿನದಿಂದ ದಿನಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿದ್ರೂ ಕೂಡ, ಇಂಧನದ ಬೇಡಿಕೆ ಮಾತ್ರ ಕಮ್ಮಿ ಆಗಿಲ್ಲ. ಬದಲಿಗೆ ವಾಹನಗಳ ಸಂಖ್ಯೆ ಹೆಚ್ಚಾದ ಹಾಗೆ ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕೂಡ ಏರಿಕೆಯಾಗ್ತಾನೆ ಇದೆ. ಇಂದಿನ ಅಗತ್ಯ ಸಂಪನ್ಮೂಲವಾಗಿರುವ ಪೆಟ್ರೋಲ್ ಹಾಗೂ ಡೀಸೆಲ್ ದರ ಹೇಗಿದೆ ಅನ್ನೋದರ ಬಗ್ಗೆ ನೋಡೋದಾದ್ರೆ, ಇಲ್ಲಿದೆ ನೋಡಿ ಅದರ ಸಂಪೂರ್ಣ ಪಟ್ಟಿ..

ಎಸ್ ‘ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಪ್ರತಿ ಲೀಟರ್ ಪೆಟ್ರೋಲ್ ದರ 110 ರೂಪಾಯಿ 93 ಪೈಸೆ ಇದೆ. ಅದರಂತೆ ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಲೀಟರ್ ಪೆಟ್ರೋಲ್ ಬೆಲೆ 110 ರೂಪಾಯಿ 93 ಪೈಸೆ ಇದೆ. ಆದರೆ ರಾಮನಗರ ಜಿಲ್ಲೆಯಲ್ಲಿ ಮಾತ್ರ ಪೆಟ್ರೋಲ್ ದರ ಸ್ವಲ್ಪ ಹೆಚ್ಚಿದ್ದು, ಪ್ರತಿ ಲೀಟರ್‌ಗೆ 111 ರೂಪಾಯಿ 11 ಪೈಸೆಯಿದೆ ಎಂದು ಕೇಳಿ ಬರ್ತಾ ಇದೆ.

ಇನ್ನು ಡೀಸೆಲ್ ದರದ ವಿಚಾರಕ್ಕೆ ಬರುವುದಾದರೆ, ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಲೀಟರ್ ಡೀಸೆಲ್ ಬೆಲೆ 98 ರೂಪಾಯಿ 80 ಪೈಸೆ ಇದೆ. ಅದರಂತೆ ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಬಳ್ಳಾರಿ, ಬೀದರ್, ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮೈಸೂರು, ರಾಯಚೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ವಿಜಯನಗರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಪ್ರತಿ ಲೀಟರ್ ಡೀಸೆಲ್ ದರ 98 ರೂಪಾಯಿ 80 ಪೈಸೆ ಇದೆ ಅಂತ ತಿಳಿದುಬಂದಿದೆ. ಇಲ್ಲಿಯೂ ಕೂಡ ರಾಮನಗರ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಸ್ವಲ್ಪ ಭಿನ್ನವಾಗಿದ್ದು, ಲೀಟರ್‌ಗೆ 99 ರೂಪಾಯಿ 01 ಪೈಸೆ ಇದೆ ಎನ್ನಲಾಗ್ತಿದೆ. ಈ ಮಾಹಿತಿ ಬಗ್ಗೆ ನಿಮ್ಮನಿಸಿಕೆಯ ಕಾಮೆಂಟ್ ಮೂಲಕ ತಿಳಿಸಿ.

About The Author