ವರುಣನ ಅಬ್ಬರ ಮತ್ತೆ ಶುರು – ಈ 5 ಜಿಲ್ಲೆಗಳಲ್ಲಿ ಭಾರಿ ಮಳೆ!

ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಸದ್ಯ ತೀವ್ರ ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೇ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಇಂದು ರಾಜ್ಯದ ಹವಾಮಾನ ಹೇಗಿರಲಿದೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ.

ಎಸ್ ‘ರಾಜ್ಯಾದ್ಯಂತ ನೈಋತ್ಯ ಮಾನ್ಸೂನ್ ಪ್ರಭಾವ ತಗ್ಗಿದ್ದು, ನಿನ್ನೆ ಉತ್ತರ ಕನ್ನಡದ ಮಂಕಿಯಲ್ಲಿ ಅತಿ ಹೆಚ್ಚು ಅಂದ್ರೆ 3 ಸೆಂಟಿಮೀಟರ್ ಮಳೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ ವಾರಪೂರ್ತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಗದಗದಲ್ಲೂ ಒಂದೆರಡು ಕಡೆ ಸಾಧಾರಣ ಮಳೆಯಾಗಬಹುದು. ಇದರ ಜೊತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಮಳೆಯ ಮುನ್ಸೂಚನೆ ಇದೆ. ಒಟ್ಟಾರೆಯಾಗಿ ಈ ವಾರ ರಾಜ್ಯದಲ್ಲಿ ಎಲ್ಲಾ ಕಡೆ ಭಾರೀ ಮಳೆಯಾಗುವ ಮುನ್ಸೂಚನೆ ಇಲ್ಲ.

ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲೂ ಮುಂದಿನ 48 ಗಂಟೆಗಳ ಕಾಲ ಇದೇ ಹವಾಮಾನ ಮುಂದುವರಿಯಲಿದ್ದು, ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇನ್ನು ದೇಶದ ಮಳೆಗಾಲದ ಪರಿಸ್ಥಿತಿಯನ್ನು ನೋಡುವುದಾದರೆ, ಭಾರತದಲ್ಲಿ ಮುಂಗಾರು ಕೊನೆಯ ಹಂತದಲ್ಲಿದ್ದು, ಪರ್ಯಾಯ ದ್ವೀಪ ಭಾರತದಲ್ಲಿ ಮುಂದಿನ ಏಳು ದಿನಗಳವರೆಗೆ ಮಳೆಯ ಚಟುವಟಿಕೆ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೂ ಇದು ಮಾನ್ಸೂನ್ ಸಂಪೂರ್ಣ ಹಿಂಪಡೆಯುವಿಕೆಯಲ್ಲ, ಬದಲಿಗೆ ತಾತ್ಕಾಲಿಕ ವಿರಾಮವಷ್ಟೇ ಆಗಿದೆ. ಉತ್ತರ ಪ್ರದೇಶ ಸೇರಿದಂತೆ ದೇಶದ ಇತರ ಕೆಲವು ಭಾಗಗಳಲ್ಲಿ ಕಡಿಮೆ ಒತ್ತಡದ ಪ್ರದೇಶ ಹಾಗೂ ಚಂಡಮಾರುತದ ಪರಿಚಲನೆಯಿಂದಾಗಿ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ ಅಂತ ಹೇಳಲಾಗ್ತಿದೆ. ರಾಜ್ಯದಲ್ಲಿ ಸದ್ಯ ಮಳೆಯ ಅಬ್ಬರ ಕಡಿಮೆಯಿದ್ದು, ಬಿಸಿಲಿನ ತಾಪ ಹೆಚ್ಚಿರುವ ಕಾರಣ ಜನ ಹೈರಾಣಾಗಿದ್ದಾರೆ.

About The Author