Haveri News: ಹಾವೇರಿ: ಕಾಂಗ್ರೆಸ್ ಸಚಿವ ಸತೀಶ್ ಜಾರಕಿಹ“ಳಿ ಮನೆ ಮೇಲೆ ಇ.ಡಿ. ದಾಳಿ ಖಂಡಿಸಿ, ಶನಿವಾರದಂದು ಪ್ರತಿಭಟನೆ ನಡೆಸಲು ಹಾವೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಿರ್ಧರಿಸಿದ್ದಾರೆ.
ಹಾನಗಲ್ ತಾಲೂಕು ವಾಲ್ಮೀಕಿ ಸಮಾಜ ಘಟಕದಿಂದ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇಡಿ ದಾಳಿ ರಾಜಕೀಯ ಪ್ರೇರಿತ ಹಾಗೂ ರಾಜಕೀಯ ಷಡ್ಯಂತ್ರ ಎಂದು ಆರೋಪಿಸಿರುವ ಕಾರ್ಯಕರ್ತರು, ಕೇಂದ್ರ ತನಿಖಾ ಸಂಸ್ಥೆಗಳನ್ನು ರಾಜಕೀಯ ದ್ವೇಷಕ್ಕಾಗಿ ಬಳಸಿಕೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.
ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು . ಸಚಿವರಿಗೆ ಮಾನಸಿಕ ಹಾಗೂ ರಾಜಕೀಯ ಒತ್ತಡ ಹೇರುವ ಪ್ರಯತ್ನ ನಡೆಯುತ್ತಿದೆ . ದಾಳಿಯ ಹಿಂದಿರುವ ಸತ್ಯಾಸತ್ಯತೆಗಳನ್ನು ಬಹಿರಂಗಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಅಲ್ಲದೇ, ಪ್ರತಿಭಟನೆಗೆ ಎಲ್ಲಾ ಸಮಾಜಗಳ ಬಾಂಧವರು ಭಾಗವಹಿಸುವಂತೆ ಮನವಿ ಮಾಡಿದ್ದಾರೆ. ಪ್ರಗತಿಪರ ಸಂಘಟನೆಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಲಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಪ್ರತಿಭಟನೆ ಯಶಸ್ವಿಗೊಳಿಸುವಂತೆ ಮನವಿ ಮಾಡಲಾಗಿದೆ.




