ಈ ಜಿಲ್ಲೆಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ರಾಜ್ಯದಲ್ಲಿ ಸದ್ಯ ನೈಋತ್ಯ ಮುಂಗಾರು ಸ್ವಲ್ಪ ಮಂದಗೊಂಡಿದೆ. ಆದರೂ ಮುಂದಿನ ಎರಡು ದಿನಗಳ ಕಾಲ, ಅಂದರೆ ಸೆಪ್ಟೆಂಬರ್ 11 ಮತ್ತು 12ರಂದು ರಾಜ್ಯದ ಹಲವೆಡೆ ಸಾಧಾರಣ ಹಾಗೂ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೊದಲು ಇವತ್ತಿನ ಮಳೆಯ ವರದಿ ಹೇಗಿದೆ ಅಂತ ನೋಡೋಣ ಬನ್ನಿ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಗದಗ, ಕೊಪ್ಪಳ, ಧಾರವಾಡ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆ ಬೀಳುವ ನಿರೀಕ್ಷೆಯಿದೆ. ಅದೇ ರೀತಿ, ದಕ್ಷಿಣ ಒಳನಾಡಿನ ಬಳ್ಳಾರಿ, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಇನ್ನು ನಾಳೆ, ಅಂದರೆ ಸೆಪ್ಟೆಂಬರ್ 12ರಂದು ಎಲ್ಲಿ ಮಳೆಯಾಗಬಹುದು ಅನ್ನೋದನ್ನ ನೋಡುವುದಾದರೆ… ಕರಾವಳಿಯಲ್ಲಿ ಯಥಾಸ್ಥಿತಿ ಮುಂದುವರಿದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆ ಮುಂದುವರಿಯಲಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ವಿಶೇಷವಾಗಿ ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿ ಮಳೆಯ ಅಬ್ಬರ ಸ್ವಲ್ಪ ಹೆಚ್ಚಿರಬಹುದು. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಅಂತ ಹೇಳಲಾಗ್ತಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆಯೇ ದಾಖಲಾಗಿದೆ. ಅದರ ವಿವರ ಇಲ್ಲಿದೆ ನೋಡಿ: ಎಸ್ ‘ಚಿಕ್ಕಮಗಳೂರಿನ ಕಳಸದಲ್ಲಿ ಗರಿಷ್ಠ 3 ಸೆಂಟಿಮೀಟರ್ ಮಳೆಯಾಗಿದೆ. ಹಾಗೆಯೇ ಉತ್ತರ ಕನ್ನಡದ ನೀಲ್ಕುಂದ್, ಹುಬ್ಬಳ್ಳಿಯ ಧಾರವಾಡ, ಮತ್ತು ಕೊಡಗಿನ ಸಂತಹಳ್ಳಿಯಲ್ಲಿ ತಲಾ 2 ಸೆಂಟಿಮೀಟರ್ ಮಳೆ ದಾಖಲಾಗಿದೆ. ಇನ್ನು ಬೆಳ್ತಂಗಡಿ, ಸಿದ್ದಾಪುರ, ಹಾಗೂ ಶಿವಮೊಗ್ಗದ ಕೆಲ ಭಾಗಗಳಲ್ಲಿ ತಲಾ 1 ಸೆಂಟಿಮೀಟರ್ ಮಳೆ ಬಿದ್ದಿದೆ ಎಂದು ವರದಿಯಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಮುಂಗಾರು ಸ್ವಲ್ಪ ದಣಿದಂತಿದ್ದರೂ, ಅಲ್ಲಲ್ಲಿ ಬರುವ ಈ ಮಳೆ ರೈತರಿಗೆ ಹಾಗೂ ವಾತಾವರಣಕ್ಕೆ ಕೊಂಚ ತಂಪೆರೆಯುತ್ತಿದೆ ಅಂತಾನೆ ಹೇಳಬಹುದು.

About The Author