Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು ನಾಯಕರು ಭಾರತದ ಆರ್ಥಿಕತೆಯನ್ನು ಕೊಂಡಾಡಿದ್ದಾರೆ. ಆದರೆ ವಿರೋಧ ಪಕ್ಷದ ನಾಯಕರು ಮೆನು ಬಗ್ಗೆ ಮಾತನಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಿರುದ್ಧ ಜೋಶಿ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ… ಜಾಗತಿಕ ಮಟ್ಟದಲ್ಲಿ ಕಠಿಣ ಪರಿಸ್ಥಿತಿ ಇದ್ದರೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದರು. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು ನಾಯಕರು ಭಾರತದ ಆರ್ಥಿಕತೆಯನ್ನು ಕೊಂಡಾಡಿದ್ದಾರೆ ಎಂದು ಹೇಳಿದರು.
ಇದೇ ವೇಳೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ… ದೇಶದ ಆರ್ಥಿಕತೆ ಹಾಗೂ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ವಿರೋಧ ಪಕ್ಷದ ನಾಯಕರು ಬ್ರಿಕ್ಸ್ ಸಭೆಯ ಮೆನು ಬಗ್ಗೆ ಮಾತನಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನು ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಉಲ್ಲೇಖಿಸಿದ ಜೋಶಿ… ದೇಶದ 81 ಕೋಟಿ ಜನರಿಗೆ ಪ್ರತಿ ತಿಂಗಳು ಉಚಿತವಾಗಿ ಅಕ್ಕಿ ನೀಡಲಾಗುತ್ತಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 17ರಿಂದ ಅಕ್ಟೋಬರ್ 17ರವರೆಗೆ ಬಿಜೆಪಿಯಿಂದ ಸೇವಾ ಸಂಕಲ್ಪ ಸಪ್ತಾಹ ಆಚರಣೆ ಮಾಡಲಾಗುವುದು. ‘ಜನಸೇವೆಯೇ ಪ್ರಭುಸೇವೆ’ ಎಂಬ ಧ್ಯೇಯದೊಂದಿಗೆ ಕಾರ್ಯಕ್ರಮ ನಡೆಯಲಿದ್ದು, ಸೆಪ್ಟೆಂಬರ್ 17ರಂದು ಪ್ರತಿ ಮನೆ ಮುಂದೆ ಆಶೀರ್ವಾದ ದೀಪ ಹಚ್ಚಲಾಗುವುದು ಎಂದು ಪ್ರಹ್ಲಾದ ಜೋಶಿ ತಿಳಿಸಿದರು.




