ರೈತರ ಸಾಲಕ್ಕೆ ಬಿಗ್ ರಿಲೀಫ್ – ಸರ್ಕಾರದಿಂದ ಮಹತ್ವದ ಆದೇಶ!

ರಾಜ್ಯದ ಬರಪೀಡಿತ ತಾಲೂಕುಗಳ ರೈತರ ನೆರವಿಗೆ ಧಾವಿಸಿರುವ ಬ್ಯಾಂಕರ್‌ಗಳ ರಾಜ್ಯ ಮಟ್ಟದ ಸಮಿತಿ, ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಮರುಪಾವತಿಗೆ ಸಂಬಂಧಿಸಿದಂತೆ ಮಹತ್ವದ ವಿಶೇಷ ಪರಿಹಾರ ಯೋಜನೆಯನ್ನು ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಭೆಯ ಟಿಪ್ಪಣಿಯ ಪ್ರಕಾರ ಈ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಮಟ್ಟದ ರಿಲೀಫ್ ನೀಡಲಿದೆ ಎಂದು ಕೇಳಿ ಬರ್ತಿದೆ.

ಎಸ್ ‘ರಾಜ್ಯದ 24 ಜಿಲ್ಲೆಗಳ ಒಟ್ಟು 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಇದರಲ್ಲಿ 89 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 12 ತಾಲೂಕುಗಳನ್ನು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್, ಕೃಷಿ ಸಾಲಗಳು, ಹೈನುಗಾರಿಕೆ, ರೇಷ್ಮೆ ಹಾಗೂ ಮೀನುಗಾರಿಕೆ ಸಾಲಗಳಿಗೆ 12 ತಿಂಗಳ ಕಾಲಾವಕಾಶ ನೀಡಲಾಗುತ್ತದೆ. ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಸಾಲ ಮರುಪಾವತಿ ಅವಧಿಯನ್ನು 3 ವರ್ಷಗಳಿಗೆ ಹಾಗೂ ತೀವ್ರ ಬರಪೀಡಿತ ತಾಲೂಕುಗಳಲ್ಲಿ ಬರೋಬ್ಬರಿ 5 ವರ್ಷಗಳಿಗೆ ವಿಸ್ತರಿಸಲಾಗಿದೆ.

ಇನ್ನು ಇದರ ಜೊತೆಗೆ ‘ಹಳೆಯ ಸಾಲ ಮರುಪಾವತಿ ಮುಂದೂಡುವುದು ಮಾತ್ರವಲ್ಲದೆ, ರೈತರ ತುರ್ತು ಅಗತ್ಯಕ್ಕೆ ತಕ್ಕಂತೆ ಬ್ಯಾಂಕುಗಳು ಹೊಸ ಸಾಲಗಳನ್ನೂ ವಿತರಿಸಲಿವೆ. ಯಾವುದೇ ರೀತಿಯ ಬಲವಂತದ ಸಾಲ ವಸೂಲಾತಿ ಮಾಡದಂತೆ ಕಟ್ಟುನಿಟ್ಟಿನ ‘ಝೀರೋ ಟಾಲರೆನ್ಸ್’ ನೀತಿಯನ್ನು ಜಾರಿಗೆ ತರಲಾಗಿದ್ದು, ರೈತರಿಂದ ಬರುವ ದೂರುಗಳಿಗೆ ಜಿಲ್ಲಾಡಳಿತ ತಕ್ಷಣವೇ ಸ್ಪಂದಿಸುವಂತೆ ಸೂಚಿಸಲಾಗಿದೆ.

ಹಾಗೇನೇ ‘ಮುಂದೆ ಯಾವುದೇ ಹೊಸ ತಾಲೂಕುಗಳು ಬರಪೀಡಿತ ಎಂದು ಘೋಷಿಸಲ್ಪಟ್ಟರೂ ಈ ಪರಿಹಾರ ಸ್ವಯಂಚಾಲಿತವಾಗಿ ಅನ್ವಯವಾಗಲಿದೆ. 2027ರ ಜನವರಿ 9ರೊಳಗೆ ಈ ಸಂಪೂರ್ಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಂಕುಗಳಿಗೆ ಸೂಚನೆ ನೀಡಲಾಗಿದ್ದು, ಸಹಕಾರ ಬ್ಯಾಂಕುಗಳ ಸಾಲ ಮರುಪಾವತಿ ವಿಸ್ತರಣೆಗೂ ಶೀಘ್ರದಲ್ಲೇ ಸೂಕ್ತ ಪರಿಹಾರ ರೂಪಿಸುವುದಾಗಿ ಸರ್ಕಾರ ತಿಳಿಸಿದೆ ಎಂದು ಹೇಳಲಾಗ್ತಿದೆ. ಈ ಬಗ್ಗೆ ನಿಮ್ಮ ಅನಿಸಿಕೆ ಏನೆಂದು ಕಾಮೆಂಟ್ ಮಾಡಿ ತಿಳಿಸಿ.

About The Author