- Advertisement -
ತಡರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಗುಂಡಿಗಳಂತಾದ ಘಟನೆ ಬೆಂಗಳೂರು ಉತ್ತರ ತಾಲೂಕು ಮಾರೇನಹಳ್ಳಿ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಸ್ತೆಗಳು ಬೃಹತ್ ಹಳ್ಳಗಳಿಂದ ಕೂಡಿದ್ದು, ನೀರು ತುಂಬಿಕೊಂಡ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಅಲ್ಲದೇ ಗ್ರಾಮಪಂಚಾಯಿತಿ ಪಕ್ಕದಲ್ಲೇ ರಾಶಿ ರಾಶಿ ತ್ಯಾಜ್ಯವಿದ್ದು ಅದನ್ನ ವಿಲೇವಾರಿ ಮಾಡದ ಕಾರಣ ನೀರು ತುಂಬಿ ದುರ್ವಾಸನೆ ಹೊಡೆಯುತ್ತಿದೆ. ಗ್ರಾಮ ಪಂಚಾಯತಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಿಗೆ ಸಮಸ್ಯೆಗಳನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡರು ಯಾವುದೇ ಸಮಸ್ಯೆ ಬಗೆಹರಿದಿಲ್ಲ ಎಂದು ಸ್ಥಳೀಯರು ಅಳಲು ತೋಡಿಕೊಳ್ಳುತ್ತಿದ್ದಾರೆ.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು
- Advertisement -