Hubli: ₹700 ಕೋಟಿ ವೆಚ್ಚದ KLE ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ

Hubli: ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLE ಜಗದ್ಗುರು ಗಂಗಾಧರ ಮಹಾಸ್ವಾಮಿಗಳ ಮೂರುಸಾವಿರಮಠ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಲೋಕಾರ್ಪಣೆಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸಬೇಕಿದ್ದ ಕಾರ್ಯಕ್ರಮಕ್ಕೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಗಣ್ಯರು ನೂತನ ವೈದ್ಯಕೀಯ ಕ್ಯಾಂಪಸ್ ಲೋಕಾರ್ಪಣೆ ನೆರವೇರಿಸಿದರು.

ಹುಬ್ಬಳ್ಳಿಯ ಗಬ್ಬೂರು ಕ್ರಾಸ್‌ನಲ್ಲಿ ನಿರ್ಮಾಣವಾಗಿರುವ KLEಯ ನೂತನ ವೈದ್ಯಕೀಯ ಕ್ಯಾಂಪಸ್ ಇದೀಗ ಲೋಕಾರ್ಪಣೆಗೊಂಡಿದೆ. ಸುಮಾರು 50 ಎಕರೆ ಪ್ರದೇಶದಲ್ಲಿ, ₹700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಕ್ಯಾಂಪಸ್‌ನಲ್ಲಿ ವೈದ್ಯಕೀಯ ಕಾಲೇಜು, 1,200 ಹಾಸಿಗೆಗಳ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರವಿದೆ.

ನೂತನ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆ ಮಾಡಬೇಕಿತ್ತು. ಆದರೆ ಕಾರ್ಯಕ್ರಮಕ್ಕೂ ಮುನ್ನ ಅಮಿತ್ ಶಾ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ವೈದ್ಯರ ಸಲಹೆ ಮೇರೆಗೆ ಅವರು ಹೋಟೆಲ್‌ನಲ್ಲೇ ವಿಶ್ರಾಂತಿ ಪಡೆದರು.

ಅಮಿತ್ ಶಾ ಗೈರಾದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, KLE ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದರು.

ಉತ್ತರ ಕರ್ನಾಟಕದ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸೇವೆಗೆ ಹೊಸ ಆಯಾಮ ನೀಡುವ ಉದ್ದೇಶದಿಂದ ನಿರ್ಮಾಣವಾಗಿರುವ ಈ ಬೃಹತ್ ಕ್ಯಾಂಪಸ್‌ನಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯಗಳು ಹಾಗೂ ಸಂಶೋಧನಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಸುಮಾರು ₹700 ಕೋಟಿ ವೆಚ್ಚದ ಈ ವೈದ್ಯಕೀಯ ಕ್ಯಾಂಪಸ್ ಇದೀಗ ಸಾರ್ವಜನಿಕ ಸೇವೆಗೆ ಸಮರ್ಪಣೆಯಾಗಿದೆ.

About The Author