Sandalwood: ಹಿರಿಯ ನಟ ಅನಂತ್ ನಾಗ್ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದು, ಶುಭ ಕೋರಿದ್ದಾರೆ.
ಎಕ್ಸ್‌ನಲ್ಲಿ ಈ ಬಗ್ಗೆ ವೀಡಿಯೋ ಶೇರ್ ಮಾಡಿರುವ ರಿಷಬ್, ಚಿಕ್ಕವಯಸ್ಸಿನಲ್ಲಿ ನೆಲದ ಮೇಲೆ ಕುಳಿತು TV ಯಲ್ಲಿ ನಿಮ್ಮನ್ನು ನೋಡಿಕೊಂಡು ಬೆಳೆದ ನನಗೆ , ನಿಮ್ಮನ್ನು ನಿರ್ದೇಶನ ಮಾಡುವ ಅವಕಾಶ ಸಿಕ್ಕಿದ್ದು ನನ್ನ ಪಾಲಿಗೆ ದೊಡ್ಡ ಗೌರವ. ಅಂತಹ ನನ್ನ ನೆಚ್ಚಿನ ಕಲಾವಿದರು ಗೌರವಾನ್ವಿತ ರಾಷ್ಟ್ರಪತಿಗಳಿಂದ ಸಿನಿಮಾ ರಂಗದ ಅತ್ಯುನ್ನತ ಪ್ರಶಸ್ತಿಯಾದ ” ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಿದ್ದು ” ಪ್ರತಿಯೊಬ್ಬ ಅಭಿಮಾನಿಗೂ ಸಂತೋಷ ಮನತುಂಬಿ ಬರುವಂತಹ ಕ್ಷಣ ಎಂದು ರಿಷಬ್ ಬರೆದಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾದಲ್ಲಿ ಅನಂತ್ ನಾಗ್ ಅವರು ಲಾಯರ್ ಪಾತ್ರ ಮಾಡಿ ಗಮನ ಸೆಳೆದಿದ್ದರು. ಈ ಸಿನಿಮಾಗೆ ಹಲವು ಪ್ರಶಸ್ತಿಗಳು ಲಭಿಸಿದ್ದವು. ಅಲ್ಲದೇ ಈ ಸಿನಿಮಾದಲ್ಲಿ ಪ್ರತಿಯೋರ್ವರ ನಟನೆಯೂ ಗಮನ ಸೆಳೆದಿತ್ತು.




