ರೈತರ ಧರಣಿ ಸ್ಥಳಕ್ಕೆ ಧಾವಿಸಿ, ರೈತರಿಗೆ ಧೈರ್ಯ ಹೇಳಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ಭೈರಮಂಗಲದಲ್ಲಿ ಬಿಡದಿ ಉಪನಗರ ಯೋಜನೆ ವಿರೋಧಿಸಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ರೈತರು ಹಾಗೂ ರೈತ ಮಹಿಳೆಯರ ಮೇಲೆ ಪೊಲೀಸರು ನಿರ್ದಯವಾಗಿ ದಬ್ಬಾಳಿಕೆ ನಡೆಸಿ ಬಂಧಿಸಿ ಚನ್ನಪಟ್ಟಣ ಪೊಲೀಸ್ ಭವನದಲ್ಲಿ ಕೂಡಿ ಹಾಕಿದ್ದರು. ಆ ರೈತರು ಅಲ್ಲಿಯೇ ಧರಣಿ ಆರಂಭಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಶೇರ್ ಮಾಡಿರುವ ಅವರು, ಮಹಿಳೆಯರ ಮೇಲೆ ದಬ್ಬಾಳಿಕೆ ನಡೆಸಿದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ ಅವರನ್ನು ಅಮಾನತು ಮಾಡಬೇಕು ಹಾಗೂ ಭೈರಮಂಗಲದಲ್ಲಿ ಪೊಲೀಸ್ ದೌರ್ಜನ್ಯ ಸಂದರ್ಭದಲ್ಲಿ ಸಂಭ್ರಮಿಸಿದ ವಿಕೃತ ದುಷ್ಟಶಕ್ತಿಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಪೊಲೀಸರಿಗೆ ಹೇಳಿದ್ದೇನೆ. ಈ ಬಗ್ಗೆ ಕೇಂದ್ರ ವಲಯದ ಉಪ ಪೊಲೀಸ್ ಮಹಾನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತುಕತೆ ನಡೆಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಬಳಿಕ ಧರಣಿನಿರತ ರೈತರು, ರೈತ ಮಹಿಳೆಯರ ಮನವೊಲಿಸಿ ಧರಣಿ ಕೈಬಿಡಲು ಒಪ್ಪಿಸಲಾಯಿತು. ಈ ಸಂದರ್ಭದಲ್ಲಿ ಹಣ್ಣನ್ನು ಸೇವಿಸುವ ಮೂಲಕ ಧರಣಿ ಅಂತ್ಯಗೊಳಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತಾ, ಮತ್ತೊಮ್ಮೆ ಇಂತಹ ಘಟನೆಗಳು ಮರುಕಳಿಸಿದರೆ ಪರಿಸ್ಥಿತಿ ನೆಟ್ಟಿಗಿರುವುದಿಲ್ಲ ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

About The Author